ಚಿತ್ರದುರ್ಗ: ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿ ಕಾರ‌್ಯಕ್ರಮದಡಿ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಆಗಸ್ಟ್ 31ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆ ಕೆ.ಕಿಸಾನ್ ಪೋರ್ಟಲ್‌ನಲ್ಲಿರುವ ಅರ್ಜಿ ನಮೂನೆ ಬಳಸಿ ಆಸಕ್ತ ರೈತರು, ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಜಿಲ್ಲಾಮಟ್ಟಕ್ಕೆ ಶೇಂಗಾ (ಮಳೆಯಾಶ್ರಿತ), ಚಿತ್ರದುರ್ಗ ಮತ್ತು ಹೊಳಲ್ಕೆರೆ ತಾಲೂಕು ಮಟ್ಟಕ್ಕೆ ಮುಸುಕಿನ ಜೋಳ (ಮಳೆಯಾಶ್ರಿತ), ಹೊಸದುರ್ಗ ತಾಲೂಕು ಮಟ್ಟಕ್ಕೆ ರಾಗಿ (ಮಳೆಯಾಶ್ರಿತ), ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲೂಕು ಮಟ್ಟಕ್ಕೆ ಶೇಂಗಾ (ಮಳೆಯಾಶ್ರಿತ) ಬೆಳೆಗಳಿಗೆ ಅರ್ಜಿ ಸಲ್ಲಿಸಬಹುದು.
ಜಿಲ್ಲಾ ಮಟ್ಟದ ಪ್ರಶಸ್ತಿಗೆ 30 ಸಾವಿರ ರೂ. (ಪ್ರ), 25 ಸಾವಿರ ರೂ. (ದ್ವಿ) 20 ಸಾವಿರ ರೂ.(ತೃ) ಹಾಗೂ ತಾಲೂಕು ಮಟ್ಟದ ಪ್ರಶಸ್ತಿಗೆ 15 (ಪ್ರ), 10 (ದ್ವೀ) 5 ಸಾವಿರ ರೂ. (ತೃ) ಬಹುಮಾನಗಳಿವೆ. ಅರ್ಜಿ ಶುಲ್ಕ ಇರುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.