ಸಾಂದರ್ಭಿಕ ಚಿತ್ರ 
ಜಿಲ್ಲೆ

ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ

ಬೆಳಗಾವಿ: ಜಿಲ್ಲೆಯ ಮಳೆ ಆಶ್ರಿತ ರೈತರಿಗಾಗಿ 2025&26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ರೈತರ ಆದಾಯ ಸುಸ್ಥಿರತೆ ತರಲು ಹಲವು ನಿಗದಿತ ಟಗಳ ಅಳವಡಿಕೆಗಾಗಿ ಸಹಾಯಧನ ಒದಗಿಸಲಾಗುತ್ತಿದೆ. ಮಳೆ ನೀರು ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆಗಾಗಿ ೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥಿನ್​ ಹೊದಿಕೆ, ಹೊಂಡದ ಸುತ್ತಲೂ ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಪಂಪ್​ಸೆಟ್​, ನೀರನ್ನು ಬೆಳೆಗೆ ಹಾಯಿಸಲು ತುಂತುರು ನೀರಾವರಿ ಟಕಗಳ ಪ್ಯಾಕೇಜ್​ ರೂಪಿಸಿ, ಅಳವಡಿಸಿಕೊಳ್ಳುವ ರೈತರಿಗೆ ಸಹಾಯಧನ ನೀಡಲು ಕೃಷಿ ಭಾಗ್ಯ ಯೋಜನೆ ರೂಪಿಸಲಾಗಿದೆ.

2014-15ರಿಂದ 2019&20ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ಯಾವುದೇ ಇಲಾಖೆ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ. ಅರ್ಜಿ ಸಲ್ಲಿಸುವ ರೈತರು ಭಾವಚಿತ್ರ, ಆಧಾರ್​ ಪ್ರತಿ, ಪಹಣಿ ಪ್ರತಿ, ಬ್ಯಾಂಕ್​ ಪಾಸ್​ಬುಕ್​, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾದರೆ ಜಾತಿ ಪ್ರಮಾಣ ಪತ್ರದ ಜತೆ ಕೃಷಿ ಭಾಗ್ಯ ಯೋಜನೆ ಅಥವಾ ಬೇರೆ ಇಲಾಖೆ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿ ಆಗಿರುವುದಿಲ್ಲವೆಂದು ನಿರಾೇಪಣಾ ಪತ್ರ ಪಡೆದು ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್​.ಡಿ.ಕೋಳೇಕರ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.