ಸಿರಗುಪ್ಪ: ಕೃಷಿ ಪತ್ತಿನ ಸಹಕಾರ ಸಂಘಗಳು ಕೃಷಿ ಮತ್ತು ಕೃಷಿಯೇತರ ಅಗತ್ಯಕ್ಕೆ ಸಹಕಾರಿಯಾಗಿವೆ ಎಂದು ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಚೊಕ್ಕ ಬಸವನಗೌಡ ಹೇಳಿದರು.
ಪಟ್ಟಣದ ನಂ.2 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳನ್ನು ಉದ್ಘಾಟಿಸಿ ಭಾನುವಾರ ಮಾತನಾಡಿದರು. ಪ್ರಾಥಮಿಕ ಕೃಷಿ ಸಂಘಗಳು ಗ್ರಾಮೀಣ ಕೃಷಿ ಸಾಲಗಾರರೊಂದಿಗೆ ನೇರವಾಗಿ ವ್ಯವಹರಿಸುತ್ತವೆ. ಸಾಲ ನೀಡಿ ಮರುಪಾವತಿಯನ್ನು ಸಂಗ್ರಹಿಸುತ್ತದೆ. ವಿತರಣೆ ಮತ್ತು ಮಾರುಕಟ್ಟೆ ಕಾರ್ಯಗಳನ್ನು ಸಹ ಕೈಗೊಳ್ಳುತ್ತದೆ ಎಂದರು.
ಮಾಜಿ ಶಾಸಕ ಟಿ.ಎಂ.ಚಂದ್ರಶೇಖರಯ್ಯಸ್ವಾಮಿ , ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಬಿ.ಎ.ಕೇಸರಿಮಠ, ನಂ.2 ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಟಿ.ವಿ.ನಾಂಚಾರಯ್ಯ, ಉಪಾಧ್ಯಕ್ಷ ವೈ.ಮುಕ್ಕಣ್ಣ, ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ, ಸದಸ್ಯೆ ಸುಶೀಲಮ್ಮ, ವಾಲ್ಮೀಕಿ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಬಿ.ಎಂ.ಸತೀಶ್, ಪಿ.ಎಲ್.ಡಿ.ಬ್ಯಾಂಕ್ ಉಪಾಧ್ಯಕ್ಷ ಚಂದ್ರರೆಡ್ಡಿ, ಬಿಡಿಸಿಸಿ ಬ್ಯಾಂಕ್ ಕೆ.ಸಿ.ಎಸ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಬಿ.ಜಯಪ್ರಕಾಶ್, ಹಿರಿಯ ವಕೀಲ ಎಚ್.ಕೆ.ಮಲ್ಲಿಕಾರ್ಜುನಯ್ಯ ಸ್ವಾಮಿ, ಅಂಬೇಡ್ಕರ್ ಸಂಘದ ಅಧ್ಯಕ್ಷ ಕೊಡ್ಲೆ ಮಲ್ಲಿಕಾರ್ಜುನ ಇದ್ದರು.