ಜಿಲ್ಲೆ

ಕೃಷ್ಣಾ ಅಚ್ಚಕಟ್ಟು ಪ್ರದೇಶಗಳಿಗೆ ಜು.೮ ರಿಂದ ನೀರು ಬಿಡುಗಡೆ

ಬಾಗಲಕೋಟೆ: ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ೮೦.೫೮ ಟಿಎಂಸಿ ನೀರು ಸಂಗ್ರಹವಾಗಿದ್ದು, ಜು.೮ ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ.ತಿಮ್ಮಾಪೂರ ಹೇಳಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೃಷ್ಣಾ ಮೇಲ್ದಂಡೆ ಯೋಜನೆ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಡ್ಯಾಂಗಳಲ್ಲಿ ೮೦.೫೮ ನೀರು ಸಂಗ್ರಹವಾಗಿದ್ದು, ಕಳೆದ ಸಾಲಿಗಿಂತ ೫೪.೭೭ ಟಿಎಂಸಿ ಹೆಚ್ಚುವರಿ ನೀರು ಸಂಗ್ರಹವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶವು ಮುಂಗಾರು ಹಂಗಾಮಿನ ಮಳೆ ಆಧರಿತವಾಗಿದ್ದು, ಮಳೆಯನ್ನು ಆಧರಿಸಿ ಅವಶ್ಯಕತೆಗೆ ತಕ್ಕಂತೆ ನೀರು ಹರಿಸಲು ಸಚಿವರು ಸೂಚಿಸಿದರು.

ಸಭೆಯಲ್ಲಿ ಜು.೮ ರಿಂದ ಮುಂದಿನ ೧೨೦ ದಿನಗಳಿಗೆ ಮುಂಗಾರು ಹಂಗಾಮಿಗೆ ನೀರು ಪೂರೈಸಲು ತೀರ್ಮಾನಿಸಲಾಯಿತು. ಒಳಹರಿವು ಆಧರಿಸಿ ಕಾಲುವೆಗಳಿಗೆ ಸತತವಾಗಿ ನೀರು ಬಿಡಲು ಸಚಿವ ತಿಮ್ಮಾಪೂರ ಅಽಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಬೀಳಗಿ ಶಾಸಕ ಜೆ.ಟಿ.ಪಾಟೀಲ ಸೇರಿದಂತೆ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಕ್ಕೆ ಸಂಬAಽಸಿದ ಅಽಕಾರಿಗಳು ಉಪಸ್ಥಿತರಿದ್ದರು.