ಆಲಮಟ್ಟಿ: ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಕೃಷ್ಣೆಯ ಜಲಧಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಜಂಟಿಯಾಗಿ ಶನಿವಾರ ಗಂಗಾ ಪೂಜೆ ನೆರವೇರಿಸಿ, ನಂತರ ಬಾಗಿನ ಅರ್ಪಿಸಿ, ಕೃಷ್ಣಾ ನದಿಯು ಉತ್ತರ ಕರ್ನಾಟಕ ಜನರ ಜೀವನವನ್ನು ಸಮೃದ್ಧಿಗೊಳಿಸಲಿ ಎಂದು ಶುಭ ಹಾರೈಸಿದರು.
ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವರಾದ ಎಂ.ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.