ಜಿಲ್ಲೆ

ಕೃಷ್ಣೇಗೌಡರ ನೇತೃತ್ವದಲ್ಲಿ ಪಾದಯಾತ್ರೆಗೆ ತೆರಳಿದ ಕಾರ್ಯಕತರು

Hassan

ಅರಕಲಗೂಡು: ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಗುರುವಾರ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮುಖಂಡ ಎಂ.ಟಿ.ಕೃಷ್ಣೇಗೌಡ ನೇತೃತ್ವದಲ್ಲಿ ತೆರಳಿದರು.


ಗ್ರಾಮದೇವತೆ ದೊಡ್ಡಮ್ಮ ದೇವಸ್ಥಾನದಲ್ಲಿ ಎಂ.ಟಿ.ಕೃಷ್ಣೇಗೌಡ ಅವರು ಬಸ್‌ಗೆ ಪೂಜೆ ಸಲ್ಲಿಸಿದರು. ನಂತರ ಸಾವಿರಾರು ಕಾರ್ಯಕರ್ತರು ಕೃಷ್ಣೇಗೌಡರಿಗೆ ಜೈಕಾರ ಹಾಕುತ್ತಾ ಬಸ್ ನಿಲ್ದಾಣ ಮಾರ್ಗವಾಗಿ ಅನಕೃ ವೃತ್ತದವರೆಗೆ ಮೆರವಣಿಗೆ ಸಾಗಿದರು. ಎಂ.ಟಿ. ಕೃಷ್ಣೇಗೌಡ ಮಾತನಾಡಿ, ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಐತಿಹಾಸಿಕ ಪಾದಯಾತ್ರೆ ಹಮ್ಮಿಕೊಂಡಿದ್ದ ಉತ್ತಮ ಜನ ಬೆಂಬಲ ವ್ಯಕ್ತವಾಗಿದೆ ಎಂದರು.


ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ನಡೆಯುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಅರಕಲಗೂಡು ವಿಧಾನಸಭಾ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಬಸ್‌ನಲ್ಲಿ ತೆರಳಿದರು.