ಚಿತ್ರದುರ್ಗ: ಕೆಎಂಇಆರ್‌ಸಿ(ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ನಿಧಿಯಡಿ ಜಿಲ್ಲೆಯ ಗಣಿ ಬಾಧಿತ ಪ್ರದೇಶದಲ್ಲಿ ಆರೋಗ್ಯ ಸಂಬಂಧಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡಲಾಗುವುದು ಎಂದು ಡಿಸಿ ಟಿ.ವೆಂಕಟೇಶ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಕ್ಷಯರೋಗ ನಿರ್ಮೂಲನೆ ಹಾಗೂ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಗಳ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಗಣಿ ಕಂಪನಿಗಳೊಂದಿಗೆ ಆಂದೋಲನ ಮಾದರಿ ಗಣಿಬಾಧಿತ ಪ್ರದೇಶದಲ್ಲಿ ಕ್ಷಯ ರೋಗ ಪತ್ತೆಗೆ ಮುಂದಾಗುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಕ್ಷಯರೋಗ ವಾಸಿಯಾಗುವ ಕಾಯಿಲೆ. ಈ ರೋಗದೆಡೆ ಜನರಲ್ಲಿರುವ ಕಳಂಕ ಭಾವನೆ ದೂರಗೊಳಿಸಬೇಕು. ಆರಂಭದಲ್ಲಿ ರೋಗ ಪತ್ತೆಯಾ ದರೆ,ಸೊಂಕು ಹರಡುವುದನ್ನು ತಪ್ಪಿಸಬಹುದು. ಜಿಲ್ಲೆಯಲ್ಲಿ ಕ್ಷಯರೋಗಿಗಳ ಮರಣ ಪ್ರಮಾಣ ರಾಜ್ಯಸರಾಸರಿಗಿಂತ ಹೆಚ್ಚಿದೆ. ಇದನ್ನು ಕಡಿಮೆ ಮಾಡಬೇಕು. ಕ್ಷಯರೋಗ ಪತ್ತೆ ಮನೆ,ಮನೆ ಸರ್ವೆಕಾರ್ಯ ಕೈಗೊಳ್ಳ ಬೇಕೆಂದರು.
ಕೆಎಂಇಆರ್‌ಸಿ ಅನುದಾನದಲ್ಲಿ ಕ್ಷಯರೋಗ ಪತ್ತೆಗೆ ಬೇಕಾದ ಯಂತ್ರೋಪಕರಣಗಳ ಖರೀದಿಗೆ ಯೋಜನೆ ರೂಪಿಸಿ. ಅಗತ್ಯ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಎಸ್‌ಆರ್ ನಿಧಿಯಡಿ ಖಾಸಗಿ ಕಂಪನಿಗಳಿಂದ ಯಂತ್ರೋಪಕರಣ ಪಡೆಯ ಬೇಕೆಂದರು, ಜಿಲ್ಲೆಯಲ್ಲಿ 1024 ಕ್ಷಯರೋಗಿಗಳಿದ್ದು, ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. 2023ನೇ ಸಾಲಿನಲ್ಲಿ 32735 ಜನರಿಗೆ ಕ್ಷಯರೋಗ ಪತ್ತೆ ಕಾರ್ಯ ಮಾಡಲಾಗಿದೆ. 2024ರ ಜೂನ್‌ವರೆಗೆ 27702 ಜನರಲ್ಲಿ ಕ್ಷಯಪತ್ತೆ ಕಾರ್ಯ ನಡೆಸಲಾಗಿದೆ ಎಂದು ಜಿಲ್ಲಾ ಕ್ಷಯರೋಗಾಧಿಕಾರಿ ಡಾ.ಸಿ.ಒ.ಸುಧಾ ಮಾಹಿತಿ ನೀಡಿದರು.
ಎಬಿಆರ್‌ಕೆ ಯೋಜನೆಯನ್ನು ಸರ್ಮಪಕವಾಗಿ ಅನುಷ್ಠಾನ ಮಾಡಬೇಕು. ಫಲಾನುಭವಿಗಳು ಚಿಕತ್ಸೆಗೆ ಬರುವಾಗ ಆಧಾರ್ ಹಾಗೂ ಪಡಿತರ ಚೀಟಿ ತರುವಂತೆ ಪ್ರಚಾರ ನೀಡಬೇಕು. ವೈದ್ಯಾಧಿಕಾರಿಗಳು ಆಸ್ಪತ್ರೆಯಲ್ಲಿದ್ದು ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಔಷಧ ತರುವಂತೆ ಚೀಟಿ ಬರೆದು ಕೊಡಬಾರದೆಂದರು.
ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಉಪಕಾರ‌್ಯದರ್ಶಿ ಕೆ.ತಿಮ್ಮಪ್ಪ, ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್,ಸುವರ್ಣ ಆರೋಗ್ಯ ಟ್ರಸ್ಟ್ ಜಿಲ್ಲಾ ಸಂಯೋಜಕ ಚಂದ್ರಶೇಖರ್, ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮತ್ತಿತರರು ಇದ್ದರು.
--
ಕೋಟ್
ರಾಷ್ಟ್ರೀಯ ಆರೋಗ್ಯ ಅಭಿಯಾನ ಸೇರಿದಂತೆ ವಿವಿಧ ಆರೋಗ್ಯ ಇಲಾಖೆ ಯೋಜನೆಗಳ ಬಗ್ಗೆ ಜನರನ್ನು ಜಾಗೃತಗೊಳಿಸಲು,ಆರೋಗ್ಯ ಇ ಲಾಖೆ ಅಧಿಕಾರಿಗಳು ಮಾಹಿತಿ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಬೇಕು.
ಎಸ್.ಜೆ.ಸೋಮಶೇಖರ್,ಸಿಇಒ,ಜಿಪಂ,ಚಿತ್ರದುರ್ಗ.