ಜಿಲ್ಲೆ

ಕೆಎಎಸ್‌ ಅಧಿಕಾರಿಗಳ ಸಂಘದ ಕಲ್ಯಾಣ ನಿಧಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿಂಗಳ ವೇತನ ವಂತಿಗೆ

ಕಲಬುರಗಿ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವರಾದ ಶ್ರೀ ಪ್ರಿಯಾಂಕ್‌ ಖರ್ಗೆ ಅವರು ತಮ್ಮ ಒಂದು ತಿಂಗಳ ವೇತನವನ್ನು ಕೆ.ಎ.ಎಸ್‌ ಅಧಿಕಾರಿಗಳ ಕಲ್ಯಾಣ ನಿಧಿಗೆ ದೇಣಿಗೆ ನೀಡುವುದಾಗಿ ಪ್ರಕಟಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ‌ನಡೆದ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದ ಉದ್ಘಾಟನ ಸಮಾರಂಭದಲ್ಲಿ ಪಾಲ್ಗೊಂಡ ಸಚಿವರು ಶತಮಾನೋತ್ಸವ ಅಂಗವಾಗಿ ಕೆ.ಎ.ಎಸ್‌ ಅಧಿಕಾರಿಗಳ ಸಂಘ ಸ್ಥಾಪಿಸಿದ ಕಲ್ಯಾಣ ನಿಧಿಗೆ ತಮ್ಮ ದೇಣಿಗೆಯನ್ನು ಪ್ರಕಟಿಸಿದರು.