ಕೆಎಲ್ಇ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಬೆಳಗಾವಿ:
ನಗರದ ಕೆ. ಎಲ್. ಇ ಸಂಸ್ಥೆಯ ರಾಜಾ ಲಖಮಗೌಡ ಪದವಿಪೂರ್ವ ಮಹಾವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಆದಿತ್ಯ ತಾಳೆಕರ ಈಚೆಗೆ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ 'ಚೆಸ್' ಕ್ರೀಡೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ 'ಚೆಸ್' ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಕೆ. ಎಲ್. ಇ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಸರ್ವ ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯರು, ಭೋಧಕ- ಭೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.