ಜಿಲ್ಲೆ

ಕೆಎಸ್‌ಆರ್‌ಟಿಸಿ ಬಸ್ ಉರುಳಿ ಹಲವರಿಗೆ ಗಾಯ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ:ಹಿರಿಯೂರಿಂದ ಓಬಳಾಪುರಕ್ಕೆ ತೆರಳಿ ಅಲ್ಲಿಂದ ಹಿರಿಯೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಓಬಳಾಪುರ ತಾಂಡಾ ಗೇಟ್ ಬಳಿ ಸೋಮವಾರ ಬೆಳಗ್ಗೆ 8.45ರ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು,ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಸಹಿತ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ಪ್ರಾಣಾಪಾಯವಾಗಿಲ್ಲ.
ಹಿರಿಯೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿತ್ಯ ರೂಟ್‌ಗೆ ಬರುತ್ತಿದ್ದ ಬಸ್ ಚಾಲಕನ ಬದಲಿಗೆ ,ಬೇರೆ ಡ್ರೈವರ್ ಕರ್ತವ್ಯ ದಲ್ಲಿದ್ದು,ಗೇಟ್ ಬಳಿಯ ತಿರುವಿನಲ್ಲಿ ಅಪಘಾತವಾಗಿದೆ. ಅಂದಾಜು 43ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ತಿಳಿಸಿದ್ದಾರೆ.
--