ಜಿಲ್ಲೆ

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಸಾವು

ಮಧುಗಿರಿ: ಕೆಎಸ್​ಆರ್​ಟಿಸಿ ಬಸ್​ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗ್ರಾಮ ಆಡಳಿತಾಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಸಿದ್ಧಾರ್ಥನಗರ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ. ಗುಬ್ಬಿ ತಾಲೂಕು ಮೂಕನಾಯಕನಹಳ್ಳಿ ಗ್ರಾಮದ ನಿವಾಸಿ, ಮಧುಗಿರಿ ತಾಲೂಕು ಕೊಡಿಗೇನಹಳ್ಳಿ ಹೋಬಳಿ ಪರ್ತಿಹಳ್ಳಿ ವೃತ್ತದ ಗ್ರಾಮ ಆಡಳಿತಾಧಿಕಾರಿ ಎಂ.ಎಚ್​.ಮಹೇಶ್​(31) ಮೃತ. ತುಮಕೂರಿನಿಂದ ಮೂಕನಾಯಕನಹಳ್ಳ ಪಟ್ಟಣಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹೇಶ್​ಗೆ ಮಾರ್ಗಮಧ್ಯೆ ಗೊಲ್ಲಹಳ್ಳಿ ಸಮೀಪ ಸಾರಿಗೆ ಬಸ್​ ಅಪ್ಪಳಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.