ಜಿಲ್ಲೆ

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು

ಹಾಸನ : ಜಮೀನಿನಿಂದ ಹಸುವನ್ನು ಹೊಡೆದುಕೊಂಡು ಬೇಲೂರು-ಚಿಕ್ಕಮಗಳೂರು ರಸ್ತೆಯಲ್ಲಿ ಭಾನುವಾರ ಸಂಜೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೇಲೂರು ತಾಲೂಕಿನ ಕಸಬಾ ಹೋಬಳಿಯ ಮಂಚನಾಯಕನಹಳ್ಳಿ ಗ್ರಾಮದ ಗುರುವಪ್ಪ (65) ಮೃತ ದುರ್ದೈವಿ.

ಗುರುವಪ್ಪ ಅವರು ಭಾನುವಾರ ತಮ್ಮ ಜಮೀನಿನ ಕೆಲಸ ಮುಗಿಸಿಕೊಂಡು ಸಂಜೆ ಹಸುವನ್ನು ಮನೆಗೆ ಹೊಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೇಲೂರು ಕಡೆಯಿಂದ ವೇಗವಾಗಿ ಬಸ್ ಚಲಾಯಿಸಿಕೊಂಡು ಬಂದ ಚಾಲಕ ಗುರುವಪ್ಪ ಅವರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿದ್ದಾನೆ. ಡಿಕ್ಕಿ ರಭಸಕ್ಕೆ ಗುರುವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದು, ಹಸುವಿಗೂ ಸಣ್ಣ-ಪುಟ್ಟ ಗಾಯಗಳಾಗಿವೆ. ಅಪಘಾತ ಮಾಡಿ ತಂದೆ ಸಾವಿಗೆ ಕಾರಣನಾದ ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮೃತರ ಮಗ ನಾಗರಾಜು ಬೇಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.