ಮುದುಗುಣಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿರುವುದು. 
ಜಿಲ್ಲೆ

ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಗುದ್ದಿ 13 ಮಂದಿಗೆ ಗಾಯ

ಬಾಳೆಹೊನ್ನೂರು: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಮಂಗಳವಾರ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 15 ಜನರಿಗೆ ಗಾಯಗಳಾಗಿವೆ.

ಎನ್.ಆರ್.ಪುರದಿಂದ ಬಾಳೆಹೊನ್ನೂರು ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುದುಗುಣಿ ಗ್ರಾಮದ ಬಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಮರಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಮರದ ರೆಂಬೆ ಬಸ್‌ನ ಮೇಲೆ ಬಿದ್ದು ಮೇಲ್ಚಾವಣಿ ಜಖಂಗೊಂಡು ಪ್ರಯಾಣಿಕರ ಮೇಲೆ ಬಿದ್ದಿದೆ. ಬಸ್‌ನಲ್ಲಿ 28 ಪ್ರಯಾಣಿಕರಿದ್ದರು. ಎನ್.ಆರ್.ಪುರದ ಸಮೀರ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳುಗಳು ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಎನ್.ಆರ್.ಪುರ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಸ್ ಚಾಲಕ, ನಿರ್ವಾಹಕರಿಗೆ ಯಾವುದೇ ತೊಂದರೆಯಾಗಿಲ್ಲ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.