ಜಿಲ್ಲೆ

ಕೆಐಎಡಿಬಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಲ್ಲಿನ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಯಲ್ಲಿ ನಡೆದಿರುವ ಕೋಟ್ಯಂತರ ರೂ.ಗಳ ಅವ್ಯವಹಾರ ಕುರಿತು ತನಿಖೆ ನಡೆಸಲು ಕೋರಿ ಜನಜಾಗೃತಿ ಸಂದದಿಂದ ಲೋಕಾಯುಕ್ತರಿಗೆ ಗುರುವಾರ ದೂರು ಸಲ್ಲಿಸಲಾಯಿತು.
ಕೆಐಎಡಿಬಿಯ ಹಿಂದಿನ ವಿಶೇಷ ಭೂಸ್ವಾಧೀನಾಧಿಕಾರಿ ವಿ.ಡಿ. ಸಜ್ಜನ ಅವರ ಅವಧಿಯಲ್ಲಿ ರೈತರ ಹೆಸರಿನಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್ ಖಾತೆ ತೆರೆದು 2ನೇ ಬಾರಿ ಕೋಟ್ಯಂತರ ರೂ. ಪರಿಹಾರ ಪಡೆಯಲಾಗಿದೆ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಿದರೂ ಅಧಿಕಾರಿಗಳು ನೀಡುತ್ತಿಲ್ಲ. ಮೇಲ್ಮನವಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಪ್ರಾಧಿಕಾರದ ಸಭೆಗೂ ಹಾಜರಾಗುತ್ತಿಲ್ಲ. ಆದ್ದರಿಂದ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಸರ್ಕಾರದ ಬೊಕ್ಕಸಕ್ಕೆ ಆದ ನಷ್ಟ ವಸೂಲಿ ಮಾಡಬೇಕು ಎಂದು ಜನಜಾಗೃತಿ ಸಂ ಆಗ್ರಹಿಸಿದೆ.
ಜನಜಾಗೃತಿ ಸಂದ ಅಧ್ಯಕ್ಷ ಬಸವರಾಜ ಕೊರವರ, ಮಿಥುನ ಜಾಧವ, ನ್ಯಾಯವಾದಿ ಐ.ಕೆ. ಧರಣಗೌಡರ, ಗುರು ಅಂಗಡಿ, ಶಿವನಗೌಡ ಪಾಟೀಲ, ಇತರರಿದ್ದರು.