ಚಾಮರಾಜನಗರ: ತಾಲೂಕಿನ ಕೆಲ್ಲಂಬಳ್ಳಿ-ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಕಂಪನಿಯೊಂದು ಕೆರೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಕೆಲ್ಲಂಬಳ್ಳಿ ಗ್ರಾಮದ ನಿವಾಸಿ ಶಿವಕುಮಾರ್ ಅವರು ತಹಸೀಲ್ದಾರ್ ಕಚೇರಿಯಲ್ಲಿ ಶೀರಸ್ತೇದಾರ್ ಜಬೀನಾ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಜಿಲ್ಲೆಯ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗಾಗಿ ಕೆಲ್ಲಂಬಳ್ಳಿ-ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಅನೇಕ ಕೈಗಾರಿಕೆಗಳು ಸ್ಥಾಪನೆಯಾಗಿ ಉತ್ಪಾದನೆಯನ್ನು ಪ್ರಾರಂಭ ಮಾಡಿವೆ. ಆದರೇ ಅನೇಕ ಕರ್ಖಾನೆಗಳು ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿವೆ ಎಂದು ದೂರಿದರು.
ಸರ್ವೇ ನ.119 ರಲ್ಲಿ ಬಿರ್ಲಾ ಕಂಪನಿಗೆ ಕೈಗಾರಿಕೆ ಪ್ರಾರಂಬಿಸಲು ಖಾಲಿ ನಿವೇಶನವನ್ನು ಕೆಆರ್‌ಐಡಿಎಲ್ ಮಂಜೂರು ಮಾಡಿದೆ. ಆದರೇ ಮಂಜೂರಾದ ನಿವೇಶನಕ್ಕಿಂತ ಹೆಚ್ಚಿನ ಪ್ರದೇಶವನ್ನು ಬಿರ್ಲಾ ಕಂಪನಿಯವರು ಒತ್ತುವರಿ ಮಾಡಿಕೊಂಡಿದ್ದು, ಕೆರೆಯನ್ನು ಒಳಗೊಂಡಂತೆ ಸುತ್ತುಗೋಡೆಯನ್ನು ನಿರ್ಮಾಣ ಮಾಡಿದೆ. ಈ ಸಂಬಂಧ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರಿಗೆ ದೂರು ನೀಡಿದರೆ ಉಡಾೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿದರು.
ಕೈಗಾರಿಕಾ ಉದ್ದೇಶಕ್ಕಾಗಿ ಜಮೀನು ಕಳೆದುಕೊಂಡ ಕುಟುಂಬದವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗ ನೀಡುತ್ತೇವೆ ಎಂಬ ಭರವಸೆ ನೀಡಿದ್ದ ಕಂಪನಿಗಳು ಉದ್ಯೋಗ ದೊರಕಿಸಿಕೊಡುವಲ್ಲಿ ವಿಲವಾಗಿದೆ. ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕಳೆದುಕೊಂಡು ಸ್ಥಳೀಯರಿಗೆ ಉದ್ಯೋಗ ವಂಚಿಸುತ್ತಿದ್ದಾರೆ ಎಂದು ಮನವಿ ಪತ್ರದಲ್ಲಿ ದೂರಿದ್ದಾರೆ.