ನವನಗರಸ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಿದರು.  
ಜಿಲ್ಲೆ

ಕೆಲಸದ ಒತ್ತಡದಿಂದ ದೂರವಿರಲು ಕ್ರೀಡೆ ಅವಶ್ಯ

ಬಾಗಲಕೋಟೆ: ಕೆಲಸದ ಒತ್ತಡದಿಂದ ದೂರವಿರಲು, ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆ ಮತ್ತು ಸಾಂಸ್ಕೃತಿ ಚಟುವಟಿಕೆಗಳು ಅವಶ್ಯವಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕ್ರೀಡಾ ಮನೋಭಾವ ಹೊಂದಿ ಸಕ್ರೀಯವಾಗಿ ಪಾಲ್ಗೊಳ್ಳುವಂತಾಗಬೇಕು ಎಂದರು.
ಸರ್ಕಾರಿ ನೌಕರರು ತುಂಬಾ ಉತ್ಸುಕರಾಗಿದ್ದಾರೆ. ೭ನೇ ವೇತನ ಆಗಬೇಕಾಗಿದೆ. ಸರ್ಕಾರ ಇದಕ್ಕೆ ಸ್ಪಂಽಸಿದ್ದು, ಮುಖ್ಯಮಂತ್ರಿಗಳು ಮಧ್ಯಂತರ ವರದಿ ತರಿಸಿಕೊಂಡು ಮಾರ್ಚ ತಿಂಗಳ ಒಳಗಾಗಿ ವರದಿಗೆ ಒಪ್ಪಿಗೆ ಕೊಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ೨.೫೮ ಲಕ್ಷ ಹುದ್ದೆಗಳು ಖಾಲಿ ಇವೆ. ಸರ್ಕಾರ ಖಾಲಿ ಹುದ್ದೆಗಳನ್ನು ತುಂಬುವ ಕೆಲಸ ಮಾಡುವದರ ಜೊತೆಗೆ ೭ನೇ ವೇತನ ಜಾರಿಗೆ ತರುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ೨ ಕೋಟಿ ರೂ.ಗಳನ್ನು ನೀಡಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಸಹ ನೆರವೇರಿಸಲಾಗುತ್ತಿದೆ. ಈಗಾಗಲೇ ಭವನ ನಿರ್ಮಾಣಕ್ಕೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದಿಂದ ಜಾಗ ನೀಡಲಾಗಿದೆ. ತಮ್ಮ ಮನೆಯ ಕೆಲಸದಂತೆ ಸರಕಾರಿ ನೌಕರರು ಕ್ರೀಯಾಶೀಲರಾಗಿ ಕೆಲಸ ಮಾಡಿದಾಗ ಮಾತ್ರ ರಾಜ್ಯ, ಜಿಲ್ಲೆ, ತಾಲೂಕು ಸರ್ವಾಂಗೀಣ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಟಿ.ಭೂಬಾಲನ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಜಿಲ್ಲಾ ಗೌರವಾಧ್ಯಕ್ಷ ಎಸ್.ಎಸ್ ಇಂಜಿಗನೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.