ಹುಬ್ಬಳ್ಳಿ : ಸಮಾಜದ ಕೆಳಸ್ತರದ ಕುಟುಂಬಗಳನ್ನು ಮುಖ್ಯವಾಹಿನಿಗೆ ತರುವ ಕಾರ್ಯವನ್ನು ದೇವಾಂಗ ಸಮಾಜದ ಸಂಘಟನೆಗಳು ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಲಹೆ ನೀಡಿದರು.
ರಾಜ್ಯ ದೇವಾಂಗ ಸಂಘ, ಹುಬ್ಬಳ್ಳಿ ದೇವಾಂಗ ಕೇಂದ್ರೀಯ ಸಮಿತಿ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇವಾಂಗ ಸಮಾಜದ ಬೇಡಿಕೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಪಂಧಿಸುತ್ತಿವೆ. ನೇಕಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಗೆ ದೇವಾಂಗ ಸಮಾಜದವರನ್ನು ಬಿಜೆಪಿ ನೇಮಕ ಮಾಡಿದೆ. ಸಮಾಜದ ಅಭಿವೃದ್ಧಿಗೆ ಬಿಜೆಪಿ ಸದಾ ಸ್ಪಂಧಿಸುತ್ತ ಬಂದಿದೆ ಎಂದರು.
ಮಾಜಿ ಸಿಎಂ ಜಗದೀಶ ಶೆಟ್ಟರ್ ಮಾತನಾಡಿ, ನೃಪತುಂಗ ವಿವಿ ಉಪಕುಲಪತಿ ಡಾ. ಶ್ರೀನಿವಾಸ ಬಳ್ಳಿ, ಹಂಪಿಹೇಮಕೂಟ ಗ್ರಾಯತ್ರಿಪೀಠದ ಜಗದ್ಗುರು ಶ್ರೀ ದಯಾನಂದಪುರಿ ಸ್ವಾಮೀಜಿ,
ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಮಾತನಾಡಿದರು.
ರಾಜ್ಯಸಭೆ ಸದಸ್ಯ ಕೆ. ನಾರಾಯಣ, ವಾಕರಸಾ ಸಂಸ್ಥೆ ಉಪಾಧ್ಯಕ್ಷ ಬಸವರಾಜ ಕೆಲಗಾರ, ನಿವೃತ್ತ ಡಿಐಜಿ ಡಾ.ಜಿ. ರಮೇಶ, ಡಾ.ಕೆ.ಜಿ. ಬ್ಯಾಕೋಡಿ ಹಾಗೂ ಇತರರು ಉಪಸ್ಥಿತರಿದ್ದರು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿ ರಾಜ್ಯದ 30 ಜಿಲ್ಲೆಗಳ 160 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ನಗದು, ಪ್ರಶಸ್ತಿ ಲಕ ವಿತರಿಸಿ, ಗೌರವಿಸಲಾಯಿತು.