ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಕೇಂದ್ರ ಸರ್ಕಾರವೇ ಟೋಪಿ ಹಾಕಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ದೂರಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಿಗೆ 12 ಲಕ್ಷ ಕೋಟಿ ರೂ. ಬದಲು ಕೇವಲ 60 ಸಾವಿರ ಕೋಟಿ ರೂ.ನೀಡಿದೆ. ಈ ಅನ್ಯಾಯದ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಶ್ನಿಸಬೇಕು.ಕೇಂದ್ರ ಸರ್ಕಾರದಲ್ಲಿ 94 ಸಾವಿರ ಬ್ಯಾಕ್‌ಲಾಗ್ ಹುದ್ದೆಗಳು ಖಾಲಿ ಇವೆ.ಇದನ್ನೆಲ್ಲಾ ಪ್ರಶ್ನಿಸುವುದನ್ನು ಬಿಟ್ಟು ನಮ್ಮ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಗ್ಯಾರೆಂಟಿ ಯೋಜನೆಗಳಿಗೆ ಸಾರ್ವಜನಿಕವಾಗಿ ಎಸ್‌ಸಿಪಿ/ಟಿಎಸ್‌ಪಿ ಹಣ ಬಳಸಲು ಸಾಧ್ಯವಿಲ್ಲ, ಬಳಸೋದು ಇಲ್ಲ ಎಂದರು.