ಚಿಕ್ಕಮಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯನ್ನುz್ದÉÃಶಿಸಿ ಮಾತನಾಡಿದರು. 
ಜಿಲ್ಲೆ

ಕೇಂದ್ರ ಸರ್ಕಾರದಿಂದ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ

ಚಿಕ್ಕಮಗಳೂರು: ಕೇಂದ್ರಸರ್ಕಾರ ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ, ಇಡಿ, ಚುನಾವಣಾ ಆಯೋಗ ಮುಂತಾದ ಎಲ್ಲ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ರಾಜಕೀಯ ಲಾಭ ಪಡೆಯುತ್ತಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಆರೋಪಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕರ್ತರು ಮತ್ತು ಮುಖಂಡರನ್ನೊಳಗೊAಡ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಚುನಾವಣಾ ಸಂದರ್ಭದಲ್ಲಿ ಮಾತ್ರ ಅಭಿವೃದ್ಧಿ ಕೆಲಸಗಳ ಬಗ್ಗೆ ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದೆ. ಈ ಮಧ್ಯೆ ಜಿಲ್ಲೆಯ ಮತದಾರರು ಬಿಜೆಪಿಯ ಪೊಳ್ಳು ಭರವಸೆಯ ಮಾತು ಕೇಳದೆ ಐದು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿರುವುದಕ್ಕೆ ಅಭಾರಿಯಾಗಿz್ದೆÃನೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಕಟ್ಟೆ ಹತ್ತಿ ಪ್ರಚಾರ ಮಾಡಲು, ಸಮರ್ಪಕವಾಗಿ ಮಾತನಾಡುವುದನ್ನು ಕಲಿಸಿದರೆ ಮಾತ್ರ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಆದರೆ ಚುನಾವಣೆ ಸಮೀಪಿಸಿದಾಗ ಈ ಕಾರ್ಯ ಕೈಗೊಂಡರೆ ವ್ಯರ್ಥಪ್ರಯತ್ನವಾಗುತ್ತದೆ ಎಂದರು.

ಬಿಜೆಪಿ ಯುವಜನಾಂಗದಲ್ಲಿ ಧಾರ್ಮಿಕ ಮನೋಭಾವ ಬಿತ್ತುವುದು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ವಿಷಬೀಜ ಬಿತ್ತುತ್ತಿದೆ. ಇದಕ್ಕೆ ಅವಕಾಶ ಕೊಡದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಕಾರ್ಯೋನ್ಮುಖರಾಗಬೇಕು ಎಂದು ಕರೆ ನೀಡಿದರು.

ಜನರಿಗೆ ದೊಡ್ಡ ಪ್ರಮಾಣದಲ್ಲಿ ಸುಳ್ಳು ಹೇಳಿ ಬಿಜೆಪಿ ಗೆಲ್ಲುತ್ತಾ ಬರುತ್ತಿದೆ. ಇದರ ಮಧ್ಯೆ ಈ ದೇಶದ ಅಳಿವು-ಉಳಿವಿನ ಜೊತೆಗೆ ಎಲ್ಲಕ್ಕಿಂತ ಹೆಚ್ಚಾಗಿ ಈ ದೇಶದ ಸಂವಿಧಾನ ರಕ್ಷಣೆ ಮಾಡುವುದು ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ ಎಂದು ಹೇಳಿದರು.

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಿಂದೂಸ್ತಾನ್, ತಾಲೀಬಾನ್, ಪಾಕಿಸ್ತಾನ್ ಮುಸ್ಲಿಮರ ಬಗ್ಗೆ ಆರೋಪ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸಿ ಮತಪಡೆಯುತ್ತಿದೆ. ಇದನ್ನು ಮುಂಬರುವ ಚುನಾವಣೆಗಳ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಮರ್ಥವಾಗಿ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ದೇಶದ ಏಕತೆಯಲ್ಲಿ ಎಲ್ಲರೂ ಸಮಾನರು. ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್ ಸೇರಿದಂತೆ ಎಲ್ಲ ಸಮುದಾಯದವರು ಏಕತೆ ಸಂಸ್ಕೃತಿಯನ್ನು ಕಾಪಾಡುವಲ್ಲಿ ಮುಂದಾಗಬೇಕು. ಇದನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂಬುದನ್ನು ಅರಿಯಬೇಕು. ಜೊತೆಗೆ ಮತದಾರರಿಗೂ ಇದನ್ನು ಮನವರಿಕೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ ಅಂಶುಮAತ್ ಮಾತನಾಡಿ, ಕಾರ್ಯಕರ್ತರ ಪರಿಶ್ರಮ, ಮುಖಂಡರ ಸಹಕಾರದಿಂದ ಪಕ್ಷದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿದ ಪರಿಣಾಮ ಜಿಲ್ಲೆಯ ಐದೂ ಸ್ಥಾನಗಳನ್ನು ಗೆಲ್ಲುವಲ್ಲಿ ಸಫಲರಾಗಿz್ದÉÃವೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ನಿಲುವು ಹಾಗೂ ಜನವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕ ರಾಹುಲ್ ಗಾಂಧಿ ಅವರು ಸಂವಿಧಾನದ ರಕ್ಷಣೆ ಹಾಗೂ ಅದರ ಆಶಯದ ಪರವಾಗಿ ಕೆಲಸಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಶಾಸಕ ಎಚ್.ಡಿ ತಮ್ಮಯ್ಯ, ಎಐಸಿಸಿ ಕಾರ್ಯದರ್ಶಿ ಬಿ.ಎಂ ಸಂದೀಪ್, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ, ಡಾ. ಡಿ.ಎಲ್ ವಿಜಯ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.