ಜಿಲ್ಲೆ

ಕೇಂದ್ರ ಸ್ಥಾನಬಿಟ್ಟು ಹೋಗಬೇಡಿ

ಚನ್ನಬಸಯ್ಯ ಗುರುವಿನ

ಯಾದಗಿರಿ: ಜಿ¯್ಲೆಯಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಆಗಬಹುದಾದ ಅನಾಹುತ ಮತ್ತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿ¯್ಲÁ ಮಟ್ಟದ ಹಾಗೂ ಸಂಬAಧಪಟ್ಟ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಯಾವುದೇ ಕಾರಣಕ್ಕೂ ಹೋಗಬಾರದು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಸೂಚಿಸಿದರು.

ಸೋಮವಾರ ಡಿಸಿ ಕಚೇರಿಯಲ್ಲಿ ಕರೆದಿದ್ದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮತಿ ಸಭೆಯಲ್ಲಿ ಮಾತನಾಡಿದ ಅವರು, ಮಳೆಯಿಂದಾಗಿ ಮುಂದಿನ ದಿನಗಳಲ್ಲಿ ಕೃಷ್ಣಾ ಹಾಗೂ ಭೀಮಾ ನದಿಗೆ ಬರಬಹುದಾದ ಪ್ರವಾಹ ವೇಳೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನದಿ ಪಾತ್ರದ ಜನ, ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಕೃಷ್ಣಾ ಮತ್ತು ಭೀಮಾ ನದಿ ತೀರಗಳ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಂಬAಧಿಸಿದ ಅಧಿಕಾರಿಗಳು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ಸೂಚನೆ ನೀಡಿದರು.

ಜಿ¯್ಲÉಯ ಆಯಾ ತಹಸೀಲ್ದಾರರು, ತಾಪಂ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗದ ಅಧಿಕಾರಿಗಳು, ಅಭಿಯಂತರರು, ಆರ್‌ಡಿಪಿಆರ್ ಇಲಾಖೆ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಪಂ ಪಿಡಿಒ ಮತ್ತು ಪೊಲೀಸ್ ಇಲಾಖೆ ಸೇರಿ ಸಂಬAಧಿಸಿದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿ, ಅತಿವೃಷ್ಟಿ ಹಾಗೂ ಪ್ರವಾಹ ದಿಂದ ಯಾವುದೇ ಜನ, ಜಾನುವಾರುಗಳ ಜೀವ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಜಿ¯್ಲÁಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತರು ಹಂಪಣ್ಣ ಸಜ್ಜನ್, ಡಿವೈಎಸ್‌ಪಿ ಅರುಣಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ಜೆಸ್ಕಾಂ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ, ಸಹಾಯಕ ಇಲಾಖೆ ಉಪನಿರ್ದೇಶಕ ಪವನ ಇತರರಿದ್ದರು.