ಚಿಕ್ಕಮಗಳೂರು: ಕೇಂದ್ರ ಸರ್ಕಾರ ಜೀವರಕ್ಷಕ ಔಷಧಕ್ಕೆ ಕಡಿಮೆ ಶುಲ್ಕ, ಹನ್ನೆರಡು ಲಕ್ಷದವರೆಗೆ ಶೂನ್ಯ ತೆರಿಗೆ ವಿಧಿಸಿದರೆ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪಂಚಗ್ಯಾರAಟಿ ಉಳಿಸಿಕೊಳ್ಳಲು ಅಡುಗೆ ಎಣ್ಣೆಯಿಂದ ಕುಡಿಯುವ ಎಣ್ಣೆಗೂ ಬೆಲೆಏರಿಸಿ ಜನಸಾಮಾನ್ಯರನ್ನು ದೋಚುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸೇವಾಪಾಕ್ಷಿಕ-೨೦೨೫ ಅಭಿಯಾನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು ೬೯ ದಿನಬಳಕೆ ವಸ್ತುಗಳ ಬೆಲೆ ಏರಿಸುವ ಮೂಲಕ ಕಾಂಗ್ರೆಸ್ ಬೆಲೆ ಏರಿಕೆಯ ಕುಖ್ಯಾತಿ ಪಡೆದುಕೊಂಡಿದೆ ಎಂದು ಹೇಳಿದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧರ್ಮ, ರಾಷ್ಟç ವಿರೋಧಿ ಚಟುವಟಿಕೆಗೆ ಬೆಂಬಲಿಸುತ್ತಿದೆ. ರಾಷ್ಟçದ ಪ್ರಧಾನಿಗೆ ಇವಿಎಂ, ಬ್ಯಾಲೆಟ್ ಹೆಸರಿನಲ್ಲಿ ಅಪಪ್ರಚಾರ ಹಾಗೂ ಹಿಂದೂ ಸಮಾಜವನ್ನು ಹತ್ತಿಕ್ಕುವ ಸಲುವಾಗಿ ಷಡ್ಯಂತ್ರ ಹೆಣೆಯುತ್ತಿದೆ. ಇದಕ್ಕೆ ಜನಸಾಮಾನ್ಯರು ಬಲಿಯಾಗಬಾರದು. ಆ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಕೇಂದ್ರದ ಜನಪರ ನಿಲುವು, ಸಾಧನೆಗಳನ್ನು ಬೂತ್ ಮಟ್ಟದಿಂದ ಜನರಿಗೆ ಮನದಟ್ಟು ಮಾಡಬೇಕು ಎಂದು ಸೂಚಿಸಿದರು.
ಮುಂಬರುವ ದಿನದಲ್ಲಿ ಭಾರತ ಮೂರನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ. ನರೇಂದ್ರ ಮೋದಿ ಅವರ ಆಡಳಿತ ವೈಖರಿ ಇಡೀ ಪ್ರಪಂಚವೇ ಮೆಚ್ಚುವಂತಾದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳು ಪಂಕ್ಚರ್ ಮಾಡಿವೆ. ಅಲ್ಲದೇ ಬಹುಪಾಲು ಸಾಲವನ್ನು ಮಾಡುವ ಮೂಲಕ ಜನಸಾಮಾನ್ಯರ ತಲೆಗೆ ಕಟ್ಟುತ್ತಿದೆ ಎಂದು ದೂರಿದರು.
ಕೇಂದ್ರ ಸರ್ಕಾರವು ಕ್ಯಾನ್ಸರ್ ಚಿಕಿತ್ಸೆಗೆ ನಿಯಮಿತ ಶುಲ್ಕ, ತೆರಿಗೆಯಲ್ಲಿ ವಿನಾಯಿತಿ ನೀಡಿದ ಪರಿಣಾಮ ಬಡವರ್ಗದ ಜನರಿಗೂ ೧೨ ಲಕ್ಷಕ್ಕೆ ಕನಿಷ್ಟ ೧.೫೦ ಲಕ್ಷ ತೆರಿಗೆ ಹಣ ಉಳಿತಾಯವಾಗಿದೆ. ಕೆಲವು ಬಲಾಡ್ಯ ಕಾರು ಕಂಪನಿಗಳು ಕೇಂದ್ರ ಸರ್ಕಾರದ ನೀತಿಯನ್ನು ತಮ್ಮ ಉದ್ಯಮದಲ್ಲಿ ಅಳವಡಿಸಿಕೊಂಡು ತೆರಿಗೆಯಲ್ಲಿ ಗ್ರಾಹಕರಿಗೆ ವಿನಾಯಿತಿ ನೀಡುತ್ತಿವೆ ಎಂದು ಹೇಳಿದರು.
ಬಿಜೆಪಿ ಅಧಿಕಾರದ ಆಸೆಯಿಂದಾಗಿ ರಾಜಕೀಯ ಮಾಡುತ್ತಿಲ್ಲ. ಜನಸೇವಾ ದೃಷ್ಟಿಯಿಂದ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಸ್ವಾತಂತ್ರö್ಯ ಪೂರ್ವದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬದಲಿಸಿ ರಾಜಪ್ರಭುತ್ವ ಸ್ಥಾಪಿಸಲು ಹೊರಟಿದೆ. ಜಾತಿಗಳ ಮಧ್ಯೆ ವಿಷಬೀಜ ಬಿತ್ತಿ ಎತ್ತಿಕಟ್ಟುವ ಮೂಲಕ ಅಧಿಕಾರ ಉಳಿಸಿಕೊಳ್ಳಲು ದೇಶವನ್ನು ಒಡೆದಾಳುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಈ ತಿಂಗಳ ಸೆ. ೧೭ರಿಂದ ಅ. ೨ರವರೆಗೆ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಮೋದಿ ಆಡಳಿತ, ಜೀವನ ಚರಿತ್ರೆ, ಸರ್ಕಾರದ ಸಾಧನೆಗಳು, ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಸಮಗ್ರವಾಗಿ ಜನರಿಗೆ ಮುಟ್ಟಿಸಬೇಕು. ಬೂತ್‌ಮಟ್ಟದ ಕಾರ್ಯಕರ್ತರು ಮೋದಿಯವರ ಭಾವಚಿತ್ರವಿರಿಸಿ ಕೃತಜ್ಞತೆ ಸಲ್ಲಿಸುವ ಸಂದೇಶ ರವಾನಿಸಬೇಕು ಎಂದು ತಿಳಿಸಿದರು.
ಸೇವಾ ಪಾಕ್ಷಿಕ ಅಭಿಯಾನದಲ್ಲಿ ವಿಧಾನಸಭಾ ಕ್ಷೇತ್ರ, ಬೂತ್‌ಮಟ್ಟದಲ್ಲಿ ಸಂವಾದ, ಕಾರ್ಯಾಗಾರ ಹಮ್ಮಿಕೊಳ್ಳಬೇಕು. ಕೇಂದ್ರದ ಜನಪ್ರಿಯ ಯೋಜನೆ ಹಾಗೂ ರಾಜ್ಯಸರ್ಕಾರದ ಬೆಲೆಏರಿಕೆಯ ಪಟ್ಟಿಯನ್ನು ಸ್ವವಿವರವಾಗಿ ಜನರಿಗೆ ಪರಿಚಯಿಸುವ ಕಾರ್ಯ ಮಾಡಿದರೆ ಭವಿಷ್ಯದಲ್ಲಿ ರಾಷ್ಟçವು ಶಕ್ತಿಶಾಲಿಯಾಗಿ ಬೆಳವಣಿಗೆ ಹೊಂದಲು ಸಾಧ್ಯವಾಗಲಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಮಾತನಾಡಿ, ಬಹುದಿನಗಳಿಂದ ಚಳವಳಿಯಲ್ಲಿ ತೊಡಗಿದ್ದ ಕಾರ್ಯಕರ್ತರನ್ನು ಪಕ್ಷ ಸಂಘಟಿಸಲು ರಾಜ್ಯನಾಯಕರ ಅಪ್ಪಣೆ ಮೇರೆಗೆ ಸಜ್ಜುಗೊಳಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಬೂತ್, ಮಂಡಲ, ನಗರ, ಗ್ರಾಮಾಂತರ ಮೋರ್ಚಾಗಳಿಗೆ ಸೆ. ೧೭ರ ಮೋದಿಯವರ ಜನ್ಮದಿನದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರನ್ನು ಒಲೈಸಲು ಬಹಳಷ್ಟು ಕಸರತ್ತು ಮಾಡುತ್ತಿದ್ದಾರೆ. ನಾಗಮಂಗಲÀ ಪ್ರಕರಣ ಮಾಸುವ ಮುನ್ನವೇ ಮದ್ದೂರಿನಲ್ಲಿ ಗಣಪತಿ ಗಲಭೆ ಪ್ರಕರಣ ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡಿದೆ. ಹಾಗಾಗಿ ಹಿಂದೂಗಳು ಸುಮ್ಮನೆ ಕುಳಿತುಕೊಂಡರೆ ಸಾಲದು. ಕಾಂಗ್ರೆಸ್ ಸರ್ಕಾರಕ್ಕೆ ನೇರವಾಗಿ ಉತ್ತರಿಸಲು ಮುಂದಾಗಬೇಕು ಎಂದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ ಮಾತನಾಡಿ, ಸೆ. ೧೭ರಿಂದ ಅ. ೨ರವರೆಗೆ ರಕ್ತದಾನ-ಆರೋಗ್ಯ ಶಿಬಿರ, ಮೋದಿಯವರ ಜೀವನ ಆಧಾರಿತ ಪ್ರದರ್ಶಿನಿ, ಪ್ರಬುದ್ಧರ ಗೋಷ್ಠಿ, ನಮೋ ಮ್ಯಾರಥಾನ್, ಪಂ.ದೀನದಯಾಳ್ ಹೆಸರಿನಲ್ಲಿ ತಾಯಿ ಹೆಸರಿನಲ್ಲಿ ಒಂದು ಸಸಿ, ವಿಚಾರ ಸಂಕಿರಣ, ಆತ್ಮನಿರ್ಭರ ಭಾರತ, ಸ್ವಚ್ಛತಾ ಅಭಿಯಾನ, ಅಭಿವೃದ್ಧಿ ಭಾರತ ಕುರಿತು ಚಿತ್ರಕಲಾ ಸ್ಪರ್ಧೆ, ಸಂಸದ್‌ಖೇಲ್ ಸ್ಪರ್ಧೆ ಕಾರ್ಯಕ್ರಮವನ್ನು ನಡೆಸಲು ವಿವಿಧ ಮೋರ್ಚಾಗಳಿಗೆ ಜವಾಬ್ದಾರಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್, ಬಿಜೆಪಿ ರಾಜ್ಯ ಒಬಿಸಿ ಕಾರ್ಯದರ್ಶಿ ಬಿ.ರಾಜಪ್ಪ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಮುಖಂಡ ವೆನಿಲ್ಲಾ ಭಾಸ್ಕರ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮುಗುಳುವಳ್ಳಿ ದಿನೇಶ್, ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.