ಜಿಲ್ಲೆ

ಕೇಂದ್ರದಿಂದ ಕೊಬ್ಬರಿಗೆ ಬೆಂಬಲ ಬೆಲೆ:ಗೌಡರ ಕಾಳಜಿಗೆ ಸಂದ ಫಲ

ಹಾಸನ: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು, ಸಂಸದ ಪ್ರಜ್ವಲ್ ರೇವಣ್ಣನವರು ಹಾಗೂ ಹಾಸನ ಜಿಲ್ಲೆಯ ಶಾಸಕರಾದ ಸಿ.ಎನ್.ಬಾಲಕೃಷ್ಣ ರವರು, ಸ್ವರೂಪ್ ಪ್ರಕಾಶ್ ರವರು ಕೆ.ಆರ್. ಪೇಟೆ ಮಂಜು ಅವರನ್ನು ಒಳಗೊಂಡ ನಿಯೋಗ ಇತ್ತೀಚೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದರ ಫಲವಾಗಿ ಕೇಂದ್ರ ಸರ್ಕಾ ರ ಕ್ವಿಂಟಾಲ್ ಕೊಬ್ಬರಿಗೆ 250 ರೂ. ಬೆಂಬಲ ಬೆಲೆ ನೀಡುವ ಮೂಲಕ 12 ಸಾವಿರ ರೂ. ಗಳಿಗೆ ಹೆಚ್ಚಿಸಿದೆ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರಿಗೆ ಮತ್ತೊಂದು ಸಂತಸದ ಸಂಗತಿ ಎಂದರೆ ಇದೇ ತಿಂಗಳ 20 ರಿಂದ ನ್ಯಾಫೆಡ್ ಮೂಲಕ ಕೊಬ್ಬರಿ ಖರೀದಿಗಾಗಿ ನೊಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಇದಕ್ಕೆ ಸದಾ ರೈತರ ಪರವಾಗಿರುವ ದೇವೇಗೌಡರು ಹಾಗೂ ಜೆಡಿಎಸ್ ಪಕ್ಷ ಕಾರಣ ಎಂದು ಅವರು ಹೇಳಿದ್ದಾರೆ.
ಮುಂದಿನ 45 ದಿನಗಳ ಕಾಲ ನೊಂದಣಿಗೆ ಅವಕಾಶ ಇದೆ.1 ಎಕರೆಗೆ ಆರು ಕ್ವಿಂಟಾಲ್ ಕೊಬ್ಬರಿ ಮಾರಾಟ ಮಾಡಲು ಅವಕಾಶವಿದ್ದು, ಗರಿಷ್ಠ 20 ಕ್ವಿಂಟಾಲ್ ಕೊಬ್ಬರಿ ಮಾರಾಟ ಮಾಡಬಹುದು. ಹಾಸನ, ತುಮಕೂರು, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳ ರೈತರು ಇದರ ಲಾಭ ಪಡೆಯಬಹುದು ಎಂದಿದ್ದಾರೆ.
ಕೊಬ್ಬರಿಗೆ ಬೆಲೆ ಹೆಚ್ಚಿಸುವಂತೆ ಹೋರಾಟ, ಧರಣಿ, ಮುಷ್ಕರಗಳು ನಡೆದರೂ ರಾಜ್ಯ ಸರ್ಕಾರ ರೈತರ ಮನವಿಗೆ ಸ್ಪಂದಿಸಿರಲಿಲ್ಲ. ರೈತರ ಸಂಕಷ್ಟವನ್ನು ಅರಿತ ದೇವೇಗೌಡರು ಖುದ್ದು ಪ್ರಧಾನಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದರ ಪರಿಣಾಮ ಒಂದೇ ದಿನದಲ್ಲಿ ತೀರ್ಮಾನ ತೆಗೆದುಕೊಂಡು ಕ್ವಿಂಟಾಲ್ ಕೊಬ್ಬರಿಗೆ 250 ರೂ.ಪ್ರೋತ್ಸಾಹ ಧನ ಹೆಚ್ಚು ಮಾಡಿದ್ದಾರೆ .
ಆರೋಗ್ಯದ ದೃಷ್ಟಿಯಿಂದ ಕೊಬ್ಬರಿ ಉತ್ತಮ ಪೌಷ್ಟಿಕಾಂಶದಿಂದ ಕೂಡಿದ್ದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸಿಗುವಂತೆ ನ್ಯಾಯ ಬೆಲೆ ಅಂಗಡಿಗಳ ಮೂಲಕ ಕಡಿಮೆ ದರದಲ್ಲಿ ಮಾರಾಟ ಮಾಡಲು ಮತ್ತು ಬಾಣಂತಿಯರಿಗೆ ಹಾಗೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ಜೊತೆ ಕೊಬ್ಬರಿ ಮತ್ತು ಬೆಲ್ಲ ನೀಡುವುದರಿಂದ ಮಕ್ಕಳ ಆರೋಗ್ಯ ಸುಧಾರಣೆಯಾಗಲಿದ್ದು ಸರ್ಕಾರ ಈ ಬಗ್ಗೆ ಚಿಂತನೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ 15 ಸಾವಿರ ರೂ.ನಲ್ಲಿ ಕೊಬ್ಬರಿ ಖರೀದಿಸಬೇಕು. ಅವರೇ ಹೇಳಿದ ಮಾತನ್ನು ಉಳಿಸಿಕೊಳ್ಳದಿದ್ದರೆ, ಆ ಮೂಲಕ ರೈತರ ನೆರವಿಗೆ ಬಾರದೇ ಇದ್ದರೆ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರೈತರೊಂದಿಗೆ ಬೃಹತ್ ಪಾದಯಾತ್ರೆ ಹ ಮ್ಮಿಕೊಂಡು ಸರ್ಕಾರದ ವಿರುದ್ಧ ಪ್ರತಿಭ ಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.