ತುಮಕೂರು: ರೈತರ, ದೇವಾಲಯಗಳ, ಮಠಮಾನ್ಯಗಳ, ಸರ್ಕಾರಿ ಶಾಲೆಗಳ, ಸಾರ್ವಜನಿಕರ ಆಸ್ತಿಗೆ ವಕ್ಫ್ ನೋಟಿಸ್ ನೀಡಿರುವುದನ್ನು ಖಂಡಿಸಿ ಹಾಗೂ ವಕ್ಫ್ ಮಂಡಳಿ ರದ್ದುಪಡಿಸುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಟಕದ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ನಮ್ಮ ಭೂಮಿ- ನಮ್ಮ ಹಕ್ಕು ಹೆಸರಿನ ಹೋರಾಟ ನಡೆಸಲಾಯಿತು.
ನಗರದ ಟೌನ್ ಹಾಲ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಟಕದ ನೇತೃತ್ವದಲ್ಲಿ ಹಿಂದುಗಳ ಜಮೀನನ್ನು ವಕ್ಫ್ಗೆ ಪರಭಾರೆ ಮಾಡುವ ಪ್ರಯತ್ನ ನಡೆದಿದೆ. ವಕ್ಫ್ ಮಂಡಳಿಯನ್ನು ರದ್ದುಪಡಿಸುವಂತೆ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಲ್ಪಂಸಂಖ್ಯಾತರ ತುಷ್ಟೀಕರಣ ಮಾಡುವ ಮೂಲಕ ಗೊಂದಲ ಮೂಡಿಸುತ್ತಿದೆ. ರೈತರ ಜಮೀನು, ದೇವಸ್ಥಾನ, ಮಠಮಾನ್ಯಗಳ ಜಾಗ, ಸಾರ್ವಜನಿಕ ಆಸ್ತಿಯನ್ನು ವಕ್ಫ್ಗೆ ನೀಡುವ
ಸಂಚು ನಡೆದಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಅಭಿವೃದ್ಧಿ ಶೂನ್ಯ ಎಂಬುದು ಜನಸಾಮಾನ್ಯರಿಗು ಗೊತ್ತಾಗಿದೆ. ಸರ್ಕಾರದಲ್ಲಿ ಯವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲವೆಂದು ಕಾಂಗ್ರೆಸ್ ಶಾಸಕರೇ ಅಸಮಾಧಾನಗೊಂಡಿದ್ದಾರೆ. ಕೇವಲ ವೋಟಿಗಾಗಿ ಯಾರನ್ನೋ ತುಷ್ಟೀಕರಣ ಮಾಡಿಕೊಂಡು ರಾಜ್ಯ ಹಾಳು ಮಾಡುತ್ತಿದ್ದಾರೆ. ಯಾವುದೋ ಸಮುದಾಯದ ಓಲೈಕೆಗಾಗಿ ದೇಶದ ಭದ್ರತೆ ಹಾಳು ಮಾಡಿ ದೇಶವನ್ನು ಒತ್ತೆ ಇಡಲು ಹೊರಟಿದ್ದಾರೆ ಎಂದು ಹರಿಹಾಯ್ದರು.
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ರಾಜ್ಯದ ಹಿಂದುಗಳ ಆಸ್ತಿ ಮೇಲೆ ವಕ್ಫ್ ಕಣ್ಣು ಹಾಕಿದೆ. ಇದರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತಿದೆ. ಸಾರ್ವಜನಿಕರ, ರೈತರ ಹಿತಾಸಕ್ತಿ ಮರೆತು ಸರ್ಕಾರ ಒಂದು ಸಮುದಾಯದ ಪರ ಹೊರಟಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಎಸ್.ರವಿಶಂಕರ್ ಟೀಕಿಸಿದರು.
ಮಾಜಿ ಶಾಸಕ ಎಂ.ಡಿ.ಲಕ್ಷಿ$್ಮನಾರಾಯಣ ಮಾತನಾಡಿ, ಸಂವಿಧಾನಕ್ಕೆ ಅಪಚಾರ ಮಾಡಿ ಕಾಂಗ್ರೆಸ್ ನಾಯಕರು ವಕ್ಫ್ ಬೆಂಬಲಿಸುತ್ತಿದ್ದಾರೆ. ಸರ್ಕಾರ ವಕ್ಫ್ ಮಂಡಳಿ ರದ್ದು ಮಾಡಬೇಕು. ರೈತರ, ಮಠಮಾನ್ಯಗಳ ಜಮೀನು ಉಳಿಸಿಕೊಡಬೇಕು ಎಂದು ಒತ್ತಾಯಿಸಿದರು.
ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆಗೆ ಬಿಜೆಪಿಯ ಬೆಂಬಲವಿದೆ. ವಕ್ಫ್ ವಿರುದ್ಧ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ ಎಂದು ರಾಜ್ಯ ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಎಸ್.ಶಿವಪ್ರಸಾದ್, ಎಸ್.ಡಿ. ದಿಲೀಪ್ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗಂಗರಾಜು, ಸಂದೀಪ್ಗೌಡ, ಕಾರ್ಯದರ್ಶಿ ಎಚ್.ಎಂ.ರವೀಶಯ್ಯ, ನಗರಾಧ್ಯಕ್ಷ ಟಿ.ಎಚ್.ಹನುಮಂತರಾಜು, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಆಂಜನಪ್ಪ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಎಚ್.ನವಚೇತನ್, ಮುಖಂಡರಾದ ಬಿ.ಎಸ್.ನಾಗೇಶ್, ಭೈರಣ್ಣ, ಸತ್ಯಮಂಗಲ ಜಗದೀಶ್, ಜ್ಯೋತಿ ತಿಪ್ಪೇಸ್ವಾಮಿ, ಮಾಜಿ ಕಾಪೋರ್ರೇಟರ್ಗಳಾದ ಬಿ.ಜಿ.ಕೃಷ್ಣಪ್ಪ, ಸಿ.ಎನ್.ರಮೇಶ್, ಮಲ್ಲಿಕಾರ್ಜುನಯ್ಯ, ಮುಖಂಡರಾದ ಮಹೇಶ್ಬಾಬು, ಮಂಜುನಾಥ್, ಪ್ರೇಮಾ ಹೆಗಡೆ ಮತ್ತಿತರರು ಭಾಗವಹಿಸಿದ್ದರು.
ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿರುವ ರಾಜ್ಯ ಸರ್ಕಾರ ಅನರ್ಹರಿಗೆ ಪಡಿತರ ಚೀಟಿ ನೀಡಿ ನಿಜವಾದ ಬಡವರ ಪಡಿತರ ಕಾರ್ಡ್ಗಳನ್ನು ರದ್ದು ಮಾಡಿದೆ. ಸೃಷ್ಟಿಸಿರುವ ವಕ್ಫ್ ಸಮಸ್ಯೆಯನ್ನು ಬಗೆಹರಿಸಬೇಕು. ತುಮಕೂರು ಜಿಲ್ಲೆಯಲ್ಲೇ 300ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿವೆ.| ಎಚ್.ಎಸ್.ರವಿಶಂಕರ್ ಬಿಜೆಪಿ ಜಿಲ್ಲಾಧ್ಯಕ್ಷಜನರ ಕಣ್ಣು ಒರೆಸಬೇಕಾದ ಸರ್ಕಾರ ಜನರ ನೆಮ್ಮದಿ ಹಾಳು ಮಾಡುತ್ತಿದೆ. ರೈತರನ್ನು ಬೀದಿಗೆ ತರಲು ಹುನ್ನಾರ ಮಾಡುತ್ತಿದೆ. ಅಧಿಕಾರಕ್ಕಾಗಿ ಅರೆಬೆಂದ ಯೋಜನೆಗಳನ್ನು ತಂದಿದೆ. | ಅಂಬಿಕಾ ಹುಲಿನಾಯ್ಕರ್ ರಾಜ್ಯಬಿಜೆಪಿ ಕಾರ್ಯದರ್ಶಿ