ಜಿಲ್ಲೆ

ಕೊಕೇನ್ ಮಾರಾಟಕ್ಕೆ ಯತ್ನಿಸಿದಾತ ಸೆರೆ


ಮಂಗಳೂರು: ನಗರದ ಬಿಜೈ ಕೆಎಸ್‌ಆರ್‌ಟಿಸಿ ಬಳಿ ಮಾದಕ ವಸ್ತು  ಕೊಕೇನ್ ಮಾರಾಟಕ್ಕೆ ಯತ್ನಿಸಿದ ಬೋಳಾರದ ಸುಪ್ರೀತ್ (35) ಎಂಬಾತನನ್ನು ಇಕೊನಾಮಿಕ್ ಆ್ಯಂಡ್ ನಾರ್ಕೋಟಿಕ್ ಅಪರಾಧ ಠಾಣೆ ಪೊಲೀಸರು ಶನಿವಾರ ಬಂಧಿಸಿ, ಒಟ್ಟು 2.37 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಬಳಿಯಿಂದ 2 ಲಕ್ಷ ರೂ. ಮೌಲ್ಯದ 21.13 ಗ್ರಾಂ ಕೊಕೇನ್, 35 ಸಾವಿರ ರೂ. ಮೌಲ್ಯದ 2 ಮೊಬೈಲ್, 2 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ. ಇನ್‌ಸ್ಪೆಕ್ಟರ್ ರಾಮಕೃಷ್ಣ ಕೆ.ಕೆ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.