ಜಿಲ್ಲೆ

ಕೊಟ್ಟ ಮಾತಿನಂತೆ ತಾಲೂಕಿನ ಎಲ್ಲ ಗ್ರಾಮಗಳ ಅಭಿವೃದ್ಧಿ

ಬೇಲೂರು; ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಕೊಟ್ಟ ಮಾತಿನಂತೆ ತಾಲೂಕಿನ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.

ತಾಲೂಕಿನ ಮಾದಿಹಳ್ಳಿ ಹೋಬಳಿಯ ಆಂದಲೆ ಗ್ರಾಮದಲ್ಲಿ 60 ಲಕ್ಷ ರೂ. ರಸ್ತೆ ಡಾಂಬರೀಕರಣ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ಬೇಲೂರು-ಹಾಸನ ಮುಖ್ಯ ರಸ್ತೆಯಿಂದ ಆಂದಲೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾಡಿಸುವಂತೆ ಗ್ರಾಮಸ್ಥರು ಹಾಗೂ ಈ ಭಾಗದ ನಾಗರಿಕರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆದ್ಯತೆ ಮೇರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು.

ಜತೆಗೆ ಶೀಘ್ರದಲ್ಲೇ ಆಂದಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಸವಾರ್ಂಗೀಣ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಿಸಲಾಗುವುದು. ಮತ್ತು ಇನ್ನಿತರೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಸಂಬಂಧಿಸಿದ ಸಚಿವರು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಹೆಚ್ಚಿನ ಅನುದಾನ ತಂದು ಶೀಘ್ರದಲ್ಲೇ ಆಂದಲೆ ಸೇರಿದಂತೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು.

ಆಂದಲೆ ಗ್ರಾಪಂ ಅಧ್ಯಕ್ಷೆ ಚಂದ್ರಕಲಾ, ಸದಸ್ಯರಾದ ಸೋಮಶೇಖರ್, ತಿಮ್ಮಜ್ಜಿ, ಮಂಜುಳಾ ಮಲ್ಲೇಶ್, ಗ್ರಾಮಸ್ಥರಾದ ಹರೀಶ್, ಲೋಕೇಶ್, ಡಿಶಾಂತ್ ಕುಮಾರ್, ಮಲ್ಲಿಕಾರ್ಜುನ, ಯೋಗೇಶ್, ಮಹೇಶ್, ಉಮಾ, ಗ್ರಾಪಂ ಮಾಜಿ ಅಧ್ಯಕ್ಷೆ ಲೀಲಾವತಿ ಸೇರಿದಂತೆ ಇತರರಿದ್ದರು.