ಜಿಲ್ಲೆ

ಕೊಡಾಜೆ ಅಪಘಾತ ರಿಕ್ಷಾ ಚಾಲಕ ಮೃತ್ಯು

ವಿಟ್ಲ: ಕಾರು ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ತಿರುವಿನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ‌.

ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಕೊಡಾಜೆ ಕಡೆಯಿಂದ ಮಾಣಿ ಕಡೆಗೆ ಆಟೋ ರಿಕ್ಷಾ ನಡುವೆ ಈ ಅಪಘಾತ ಸಂಭವಿಸಿದೆ.

ರಿಕ್ಷಾದಲ್ಲಿದಲ್ಲಿ ಪ್ರಯಾಣಿಸುತ್ತಿದ್ದ ಚಾಲಕನ ಪತ್ನಿಯ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೊಡಾಜೆ ಪಂತ್ತಡ್ಕ ನಿವಾಸಿ ಅಮ್ಮಿ ಮೃತಪಟ್ಟ ಆಟೋ ರಿಕ್ಷಾ ಚಾಲಕ.

ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಕಾರಿನ ಮೇಲೆ ಉರುಳಿ ಬಿದ್ದಿದೆ. ಎರಡು ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.