ಬಸವಕಲ್ಯಾಣ: ಗುಣತೀರ್ಥ ವಾಡಿಯಲ್ಲಿ ಇತ್ತೀಚೆಗೆ ಕೊಲೆಯಾದ ಭಾಗ್ಯಶ್ರೀ ಮನೆಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪಾಲಕರಿಗೆ ಸಾಂತ್ವಾನ ಹೇಳಿ ವೈಯಕ್ತಿಕವಾಗಿ ಒಂದು ಲಕ್ಷ ರೂ. ಧನ ಸಹಾಯ ನೀಡಿದರು.
ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಕಠಿಣ ಶಿಕ್ಷೆ ನೀಡಲು ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಲಾಗುತ್ತದೆ. ಇಂಥ ಘಟನೆಗಳು ಮರುಕಳಿಸದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಪಾಲಕರು ಬಡವರಾಗಿದ್ದಾರೆ. ವೈಯಕ್ತಿಕವಾಗಿ ಸಹಾಯ ನೀಡಿz್ದೆÃನೆ. ಸಂಜೆಯೊಳಗೆ ನಾಲ್ಕು ಲಕ್ಷ ರೂ.ಚೆಕ್ ವಿತರಿಸಲು ಸಂಬAಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪಾಲಕರಿಗೆ ಇನ್ನೂ ಇಬ್ಬರು ಮಕ್ಕಳಿದ್ದು, ಅವರ ವಿದ್ಯಾಭ್ಯಾಸದ ಜವಾಬ್ದಾರಿ ನಾವು ನಿರ್ವಹಿಸುತ್ತೇವೆ. ಪಾಲಕರಿಗೆ ಮಾಶಾಸನ ನೀಡಲು ಬೇಕಾದ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪರಿಹಾರದ ಹಣ ಇನ್ನು ಏಕೆ ಕೊಟ್ಟಿಲ್ಲ ಎಂದು ಸಂಬAಧಿತ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಪಾಲಕರಿಗೆ ಸರ್ಕಾರದಿಂದ ಮಂಜೂರಾಗುವ ಮನೆ ನಿರ್ಮಿಸಿ ಕೊಡಲು ಸ್ಥಳದಲ್ಲಿದ್ದ ಜಿಪಂ ಸಿಇಒ ಹಾಗೂ ತಾಪಂ ಇಒ ಅವರಿಗೆ ಸೂಚನೆ ನೀಡಿದರು. ಗುಣತೀರ್ಥವಾಡಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಾಣಾಧಿಕಾರಿಗೆ ಸಚಿವರು ದೂರವಾಣಿ ಮೂಲಕ ಬಸ್ಸಿನ ವ್ಯವಸ್ಥೆ ಕೈಗೊಳ್ಳುವಂತೆ ಹೇಳಿದರು.
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಪಂ ಸಿಇಒ ಡಾ.ಗಿರೀಶ್ ಬದೋಲೆ, ಸಹಾಯಕ ಆಯುಕ್ತ ಪ್ರಕಾಶ ಕುದರಿ, ತಹಸೀಲ್ದಾರ್ ಶಾಂತಗೌಡ ಬಿರಾದಾರ್, ಇಒ ರಮೇಶ ಸುಲ್ಫಿ, ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ನೀಲಕಂಠ ರಾಠೋಡ್, ದತ್ತು ಪದ್ಮೆ, ಶಂಕರ ಜಮಾದಾರ, ಗೋವಿಂದ ಚಾಮಾಲೆ, ರೇಖಾ ಹೊಸಮನಿ, ಮಲ್ಲಿಕಾರ್ಜುನ ಬೊಕ್ಕೆ, ಅರ್ಜುನ ಕನಕ, ಬಸವರಾಜ ಸ್ವಾಮಿ, ಶಶಿಕಾಂತ ಸ್ವಾಮಿ, ಮನೋಹರ ಮೈಸೆ, ರವಿ ಕೊಳಕೂರ, ಶಿವಕುಮಾರ ಬಿರಾದಾರ ಇತರರಿದ್ದರು.