ಜಿಲ್ಲೆ

ಕೊಳೆತ ಸ್ಥಿತಿಯಲ್ಲಿ ಮೈಸೂರು ವಿವಿ ಉದ್ಯೋಗಿ ಶವ ಪತ್ತೆ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ದ್ವಿತೀಯ ದರ್ಜೆ ಸಹಾಯಕ ಶಿವಕುಮಾರ್(35) ಶವ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.

ಕುವೆಂಪುನಗರ ಆದಿಚುಂಚನಗಿರಿ ರಸ್ತೆಯ ಮಹದೇಶ್ವರ ದೇವಸ್ಥಾನದ ಬಳಿ ಕಾರಿನಲ್ಲಿ ಕೆಟ್ಟ ವಾಸನೆ ಬಂದ ಕಾರಣಕ್ಕೆ ಸ್ಥಳೀಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಶಿವಕುಮಾರ್ ಶವ ಪತ್ತೆಯಾಗಿದೆ.

ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪ್ರಾಥಮಿಕ ಪರಿಶೀಲನೆಯಿಂದ ತಿಳಿದುಬಂದಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಿವಕುಮಾರ್ ಪತ್ನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಅಶೋಕಪುರಂ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.