ಜಿಲ್ಲೆ

ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್‌ನಿಂದ ಶ್ರದ್ಧಾಂಜಲಿ

ಕೊಳ್ಳೇಗಾಲ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್ ಮಾತನಾಡಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ವೇಳೆ ದೇಶದ ಆರ್ಥಿಕ ವ್ಯವಸ್ಥೆ ಉತ್ತೇಜನಕ್ಕೆ ಒತ್ತು ನೀಡಿದ್ದಾರೆ. ಜನರ ಜೀವನ ಮಟ್ಟವನ್ನು ಸುಧಾರಿಸಲು, ಸ್ವಾವಲಂಬಿ ದೇಶಕಟ್ಟಲು ಮನಮೋಹನ್ ಸಿಂಗ್ ಅವರು ಶ್ರಮಿಸಿದ್ದಾರೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರವಿ ಬಸ್ತೀಪುರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ನಗರಸಭಾ ಮಾಜಿ ಅಧ್ಯಕ್ಷ ಶಾಂತರಾಜು ಬಸ್ತೀಪುರ, ಎಸ್.ರಮೇಶ್, ಮಾಜಿ ಉಪಾಧ್ಯಕ್ಷ ಹರ್ಷ, ಸದಸ್ಯರಾದ ಮಂಜುನಾಥ್, ರಾಘವೇಂದ್ರ, ಧರಣೇಶ್, ನಾಮ ನಿರ್ದೇಶನ ಸದಸ್ಯ ಸ್ವಾಮಿ ನಂಜಪ್ಪ, ಮುಖಂಡರಾದ ನರಸಿಂಹನ್, ಸಿದ್ದಾರ್ಥ, ಜಗದೀಶ್ ಶಂಕನಪುರ, ಕುಮಾರಸ್ವಾಮಿ, ಮಾಜ್, ಗೋವಿಂದ, ಜಿಪಂ ಮಾಜಿ ಸದಸ್ಯ ಕೊಪ್ಪಳಿನಾಯಕ ಇತರರು ಇದ್ದರು.