ಬೇಲೂರು: ತಾಲೂಕಿನ ಕೋಗಿಲಮನೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯರಾದ ಶೇಷಪ್ಪ, ಉಪಾಧ್ಯಕ್ಷರಾಗಿ ಹೇಮಾವತಿ ಗುರುವಾರ ಅವಿರೋಧವಾಗಿ ಆಯ್ಕೆಯಾದರು.
ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶೇಷಪ್ಪ ಮತ್ತು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಹೇಮಾವತಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಟೇಶ್ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ಸಂಗಪ್ಪ, ಪುಟ್ಟಸ್ವಾಮಿ, ಅಭಿವೃದ್ಧಿ ಅಧಿಕಾರಿ ಚಿದಾನಂದ್ ಇತರರು ಇದ್ದರು.
8 ಸದಸ್ಯರನ್ನೊಳಗೊಂಡ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ 5 ಸದಸ್ಯರು ಪಾಲ್ಗೊಂಡು, ಮೂವರು ಗೈರಾದ್ದರು.