ಬಾಗಲಕೋಟೆ ನಗರದ ಪೊಲೀಸ್ ವರಿಷ್ಠಾಽಕಾರಿಗಳ ಕಚೇರಿಯಲ್ಲಿ ಭಾನುವಾರ ಮಾಕ್ ಡ್ರೀಲ್ ನಡೆಸುವ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಪೊಲೀಸ್ ವರಿಷ್ಠಾಽಕಾರಿ ಪ್ರಸನ್ನ ದೇಸಾಯಿ ಮಾತನಾಡಿದರು. 
ಜಿಲ್ಲೆ

ಕೋಟೆನಾಡಿನಲ್ಲಿ ಇಂದು ಮಾಕ್ ಡ್ರೀಲ್

ಬಾಗಲಕೋಟೆ: ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮೇ ೧೨ ರಂದು ಬೆಳಗ್ಗೆ ೯.೩೦ ಗಂಟೆಗೆ ನಾಗರಿಕ ಸುರಕ್ಷತಾ ಕುರಿತು ಮಾಕ್ ಡ್ರೀಲ್ ನಡೆಸಲಾಗುತ್ತಿದೆ ಎಂದು ಅಪರ ಪೊಲೀಸ್ ವರಿಷ್ಠಾಽಕಾರಿ ಪ್ರಸನ್ನ ದೇಸಾಯಿ ಹೇಳಿದರು.

ಇಲ್ಲಿನ ಪೊಲೀಸ್ ವರಿಷ್ಠಾಽಕಾರಿಗಳ ಕಚೇರಿಯಲ್ಲಿ ಭಾನುವಾರ ಮಾಕ್ ಡ್ರೀಲ್ ನಡೆಸುವ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾಗರಿಕ ಸುರಕ್ಷತಾ ತಾಲೀಮು ನಡೆಸುವ ಮೂಲಕ ತುರ್ತು ಪರಿಸ್ಥಿತಿ ಎದುರಾದ ವೇಳೆ ಸಾರ್ವಜನಿಕರು ಹೇಗೆ ತಮ್ಮನ್ನು ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕದಳ, ಗೃಹ ರಕ್ಷಕದಳ, ಟ್ರಾಪಿಕ್, ಎನ್.ಸಿ.ಸಿ ಸೇರಿದಂತೆ ಇತರೆ ಇಲಾಖೆಗಳ ಸಹಯೋಗದಲ್ಲಿ ಮಾಕ್ ಡ್ರೀಲ್ ಹಮ್ಮಿಕೊಳ್ಳಲಾಗುತ್ತಿದೆ ಎಂದ ಅವರು, ಮಾಕ್ ಡ್ರಿಲ್‌ಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ರೀತಿಯಲ್ಲಿ ಯಾರಿಗೂ ಅಪಾಯವಾಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಾಕ್ ಡ್ರೀಲ್ ಯಶಸ್ವಿಗೊಳಿಸುವಂತೆ ಅಽಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದಲ್ಲಿ ಸೂಕ್ತವಾದ ಜಾಗವನ್ನು ನಿಗದಿಪಡಿಸಿಕೊಂಡು ಅಗತ್ಯವಾದ ಮಾನವ ಸಂಪನ್ಮೂಲ, ಸೈರನ್, ಕಂಟ್ರೋಲ್ ರೂಮ್, ಅಂಬುಲೇನ್ಸ್, ಅಗ್ನಿಶಾಮಕ ವಾಹನ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ತಿಳಿಸಿದರು.

ಸಂಕಷ್ಟ ಪರಿಸ್ಥಿತಿಯಲ್ಲಿ ವ್ಯವಸ್ಥೆ ನಮ್ಮ ರಕ್ಷಣೆಗೆ ದಾವಿಸಲಿದೆ ಎಂಬ ವಿಶ್ವಾಸವನ್ನು ಜನರಲ್ಲಿ ಮೂಡುವಂತೆ ಯಶಸ್ವಿಯಾಗಿ ಮಾಕ್ ಡ್ರೀಲ್ ನಡೆಸಬೇಕು. ಮಾಕ್ ಡ್ರೀಲ್‌ನಲ್ಲಿ ಸೈರನ್ ಹಾಕುವ ಮೂಲಕ ಜನರು ಸುರಕ್ಷಿತ ಸ್ಥಳಕ್ಕೆ ದಾವಿಸುವುದು, ನಾಗರಿಕ ರಕ್ಷಣಾ ಸಿಬ್ಬಂದಿ, ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾಗುವುದು, ಬೆಂಕಿ ನಂದಿಸುವುದು, ಕಟ್ಟಡ ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಿ, ಅಂಬುಲೇನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸುವುದು ಹೀಗೆ ಹತ್ತು ಹಲವು ಕಾರ್ಯಾಚರಣೆಯ ಅಣಕು ಪ್ರದರ್ಶನ ಮೂಲಕ ಜಾಗೃತಿ ಮೂಡಿಸಲಾಗುತ್ತಿದ್ದು, ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಽಕಾರಿ ಮಹಾಂತೇಶ್ವರ ಜಿದ್ದಿ, ಎನ್.ಸಿ.ಸಿ ಕಮಾಂಡ ಅಽಕಾರಿ ಮಾಚೇಂದ್ರನಾಥ ಪಾಟೀಲ, ಜಿಲ್ಲಾ ಅಗ್ನಿಶಾಮಕ ಅಽಕಾರಿ ಪ್ರಕಾಶ ಪವಾರ, ಜಿಲ್ಲಾ ಗೃಹ ರಕ್ಷಕದಳದ ಅಽಕಾರಿ ಎ.ಎಲ್.ಸಾಹುಕಾರ, ಜಿಲ್ಲಾ ಸಂಚಾರಿ ಅಽಕಾರಿ ರವಿ ಪವಾರ, ಜಿಲ್ಲಾ ಸಮೀಕ್ಷಣಾಽಕಾರಿ ಡಾ.ದಯಾನಂದ ಕರೇನ್ನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.