ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಮಕ್ಕಳ ಸಮಸ್ಯೆ ಆಲಿಸಿದರು. 
ಜಿಲ್ಲೆ

ಕೋನಮೇಳಕುಂದಾ ಮುರಾರ್ಜಿಶಾಲೆಗೆ ಸಚಿವ ಖಂಡ್ರೆ ಭೇಟಿ

ಭಾಲ್ಕಿ: ಕೋನಮೇಳಕುಂದಾ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲಿಸಿದರು. ಶಾಲೆಯಲ್ಲಿ ಅವ್ಯವಸ್ಥೆ ಇರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿ ಸಚಿವರು, ತರಗತಿ ಕೋಣೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದರು. ವಿದ್ಯಾರ್ಥಿಗಳ ಊಟ, ಉಪಚಾರ ವಿಚಾರಿಸಿದ ಸಚಿವರು, ವಿದ್ಯಾರ್ಥಿಗಳು ಯಾವುದೇ ಸಮಸ್ಯೆ ಕಂಡುಬAದರೆ ನೇರವಾಗಿ ನನ್ನ ಗಮನಕ್ಕೆ ತಂದರೆ ಕ್ರಮಕೈಗೊಳ್ಳುವೆ ಎಂದರು. ವಿದ್ಯಾರ್ಥಿಗಳ ಸ್ನಾನಕ್ಕೆ ಬಿಸಿ ನೀರು ಕೊಡದಿರುವುದು, ಕಳಪೆ ಆಹಾರ ವಿತರಣೆ ಬಗ್ಗೆ ದೂರು ಕೇಳಿ ಬರುತ್ತಿವೆ. ಕೂಡಲೇ ವಿದ್ಯಾರ್ಥಿಗಳಿಗಿರುವ ಸಮಸ್ಯೆ ಬಗೆ ಹರಿಸಬೇಕು ಇಲ್ಲದಿದ್ದರೆ ಮುಲಾಜಿಲ್ಲದೆ ಕ್ರಮಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.