ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳಿಬ್ಬರಿಗೆ ವಿಷ ಕುಡಿಸಿ ವ್ಯಕ್ತಿಯೊಬ್ಬ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಕ್ಯಾಸಾಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಗ್ರಾಮದ ಕುಮಾರ್ (38) ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಜಾಮೂನಿನಲ್ಲಿ ವಿಷ ಬೆರಸಿ ತಿನ್ನಿಸಿ ತಾನೂ ವಿಷ ಸೇವಿಸಿದ್ದಾರೆ .
ಚಿಂತಾಜನಕ ಸ್ಥಿತಿಯಲ್ಲಿದ್ದ ಮೂವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪತ್ನಿ ತವರು ಮನೆಗೆ ಹೋಗಿದ್ದ ಕಾರಣದಿಂದಾಗಿ ಕುಮಾರ್ ಈ ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂದ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.