ಜಿಲ್ಲೆ

ಕ್ಯಾಂಪಸ್​ ಸಂದರ್ಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಅವ್ವಪ್ಪಣ್ಣ ಅತ್ತಿಗೇರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಕನೆಕ್ಟ್​ ಧಾರವಾಡ ಸಹಯೋಗದಲ್ಲಿ ಅಂತರಾಷ್ಟ್ರೀಯ ಉತ್ಪಾದನಾ ವಲಯದಲ್ಲಿ ಬೆಂಗಳೂರಿನ ಹಲವು ಕಂಪನಿಗಳ ವಿವಿಧ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಪಾಸಾದ 18 ರಿಂದ 25 ವಯಸ್ಸಿನ ಯುವಕರಿಗೆ ಜೂ. 5ರಂದು ಬೆಳಗ್ಗೆ 9 ಗಂಟೆಗೆ ಕ್ಯಾಂಪಸ್​ ಸಂದರ್ಶನ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಲ್ಲಿನ ಟೌನ್​ಹಾಲ್​ ಆವರಣದಲ್ಲಿನ ಅವ್ವಪ್ಪಣ್ಣ ಅತ್ತಿಗೇರಿ ಕೈಗಾರಿಕಾ ತರಬೇತಿ ಸಂಸ್ಥೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.