ಚಿತ್ರದುರ್ಗ: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಶನಿವಾರ, ಭಾನುವಾರ ನಡೆದ ಅಂತರ್ ಜಿಲ್ಲಾಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ಚಿತ್ರದುರ್ಗ ವಕೀಲರ ತಂಡ ಟ್ರೋಫಿಯೊಂದಿಗೆ ಗೆಲುವಿನ ನಗೆ ಬೀರಿದೆ.
ವಕೀಲರ ಭವನದಲ್ಲಿ ಸೋಮವಾರ ಜಿಲ್ಲಾ ವಕೀಲರ ಸಂಘಕ್ಕೆ ತಂಡವೂ ಟ್ರೋಫಿ ಹಸ್ತಾಂತರಿಸಿತು.
ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ವಕೀಲರ ಈ ಗೆಲುವು ಸಂತೋಷ ಉಂಟು ಮಾಡಿದೆ. ಮುಂದಿನ ದಿನಗಳಲ್ಲಿ ಚಿತ್ರದುರ್ಗದಲ್ಲೂ ಇದೇ ರೀತಿಯ ಟೂರ್ನಿ ಆಯೋಜಿಸುವ ಚಿಂತನೆ ಇದೆ. ಅದಕ್ಕೆ ನಿಮ್ಮೆಲ್ಲರ ಸಹಕಾರದ ಅಗತ್ಯವಿದೆ ಎಂದು ಮನವಿ ಮಾಡಿದರು.
ಮಾಜಿ ಅಧ್ಯಕ್ಷ ಎಸ್.ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಉಪಾಧ್ಯಕ್ಷ ಬಿ.ಎಂ.ಅನಿಲ್‌ಕುಮಾರ್, ವಕೀಲರಾದ ಎಚ್.ಎಂ.ಎಸ್.ನಾಯಕ, ರಿಜ್ವಾನ್, ಹನುಮಂತಪ್ಪ, ಮೂರ್ತಿ, ಲೋಕೇಶ್, ಪಿ.ಆರ್.ವೀರೇಶ್, ಅಶೋಕ್, ಶ್ರೀರಾಮು, ಶಿವಕುಮಾರ್ ಇತರರಿದ್ದರು.