ಜಿಲ್ಲೆ

ಕ್ರೀಡಾಂಗಣ ವೀಕ್ಷಿಸಿದ ಸಚಿವ ಪ್ರಿಯಾಂಕ್​ ಖರ್ಗೆ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಭೇಟಿ ನೀಡಿದರು.

ಕ್ರೀಡಾಂಗಣದಲ್ಲಿ ಮೂಲಭೂತ ಸೌಲಭ್ಯ ಒದಗಿಸಿ ಅಭಿವೃದ್ದಿಪಡಿಸುವುದರ ಜೊತೆಗೆ ಕ್ರೀಡಾಂಗಣದಲ್ಲಿರುವ ಹಳೆಯ ಕಟ್ಟಡಗಳನ್ನು‌ ನವೀಕರಸಬಹುದೇ ಅಥವಾ ಕೆಡವಿ ಆ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಬೇಕೇ ಎನ್ನುವ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸಚಿವರು ಈ ಸಂದರ್ಭದಲ್ಲಿ ಬಾಸ್ಕೇಟ್ ಬಾಲ್, ಹಾಕಿ, ಈಜುಕೊಳ, ಸೆಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಜೂಡೋ ಅಂಕಣಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ‌ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್,‌ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಭಂವರ್ ಕುಮಾರ ಮೀನಾ, ಪೊಲೀಸ್ ಕಮೀಷನರ್ ಆರ್ ಚೇತನ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಯುವಜನ‌ಸೇವೆ ಸಹಾಯಕ‌ ನಿರ್ದೇಶಕಿ ಗಾಯತ್ರಿ ಸೇರಿದಂತೆ ಮತ್ತಿತರಿದ್ದರು.