ಜಿಲ್ಲೆ

ಕ್ರೀಡಾಕೂಟಕ್ಕೆ ಚಾಲನೆ

ಸುಂಟಿಕೊಪ್ಪ: ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ, ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘ, ಬಿಲ್ಲವ ವಿದ್ಯಾರ್ಥಿ ಘಟಕದಿಂದ ಭಾನುವಾರ ಏರ್ಪಡಿಸಿದ್ದ ವಾಲಿಬಾಲ್, ಥ್ರೋಬಾಲ್, ಹಗ್ಗ ಜಗ್ಗಾಟ ಕ್ರೀಡಾಕೂಟವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಉದ್ಘಾಟಿಸಿದರು.


ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡಾ ಚಟುವಟಿಕೆಯಿಂದ ಸಮುದಾಯದವರು ಒಟ್ಟಾಗಿ ಸೇರಿ ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಹಂಚಿಕೊಳ್ಳಲು ಸಹಕಾರಿಯಾಗಲಿದೆ ಎಂದರು.


ಕೆದಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಮಾರಿ ವಿಶ್ಮಿತಾ, ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಮಧುನಾಗಪ್ಪ, ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷ ಬಿ.ಕೆ.ಮೋಹನ್, ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಉಪಾಧ್ಯಕ್ಷ ನಾಗೇಶ್ ಪೂಜಾರಿ, ದೇವಪ್ಪ, ಖಜಾಂಜಿ ಚಂದ್ರಶೇಖರ್, ಸಹ ಕಾರ್ಯದರ್ಶಿ ಹರೀಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿ ಶೇಖರ್ ಪೂಜಾರಿ, ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘದ ಮಹಿಳಾ ಉಪಾಧ್ಯಕ್ಷೆ ಗೀತಾ ವಿಶ್ವನಾಥ್ ಇದ್ದರು.