ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಪಂ, ತಾಪಂ, ಶಾಲಾ ಶಿಕ್ಷಣ ಇಲಾಖೆ, ಉಪವೀರ ಜಗದ್ಗುರು ವಿದ್ಯಾಸಂಸ್ಥೆ ಹಾಗೂ ಲಕ್ಯಾ ಗ್ರಾಮದ ಶ್ರೀ ಸಿz್ದÉÃಶ್ವರ ಪ್ರೌಢಶಾಲೆ ಸಹಯೋಗದೊಂದಿಗೆ ಆಯೋಜಿಸಿದ್ದ ಚಿಕ್ಕಮಗಳೂರು ಎಫ್ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಹೊಸದುರ್ಗದ ಉಪವೀರ ಜಗದ್ಗುರು ವಿದ್ಯಾಸಂಸ್ಥೆಯ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಶಾಸಕ ಎಚ್.ಡಿ.ತಮ್ಮಯ್ಯ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ರೇಖಾ ಹುಲಿಯಪ್ಪ ಗೌಡ, ರುದ್ರಪ್ಪ, ಕೃಷ್ಣಮೂರ್ತಿ ಅರಸ್ ಮತ್ತಿತರರಿದ್ದರು. 
ಜಿಲ್ಲೆ

ಕ್ರೀಡಾಕೂಟಗಳು ಜೀವನೋತ್ಸಾಹ ಹೆಚ್ಚಿಸುವ ಸಾಧನ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಕ್ರೀಡಾಕೂಟಗಳು ಜೀವನದ ಉತ್ಸಾಹವನ್ನು ಹೆಚ್ಚಿಸುವ ಸಾಧನ. ಸೋಲು ಗೆಲುವಿನ ಮೆಟ್ಟಿಲಾಗಬೇಕು. ಕ್ರೀಡಾ ಮನೋಭಾವದಿಂದ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಹೊಸದುರ್ಗದ ಉಪವೀರ ಜಗದ್ಗುರು ವಿದ್ಯಾಸಂಸ್ಥೆಯ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ ತಿಳಿಸಿದರು.

ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಪಂ, ತಾಪಂ, ಶಾಲಾ ಶಿಕ್ಷಣ ಇಲಾಖೆ, ಉಪವೀರ ಜಗದ್ಗುರು ವಿದ್ಯಾಸಂಸ್ಥೆ ಹಾಗೂ ಲಕ್ಯಾ ಗ್ರಾಮದ ಶ್ರೀ ಸಿz್ದೆÃಶ್ವರ ಪ್ರೌಢಶಾಲೆ ಸಹಯೋಗದೊಂದಿಗೆ ಆಯೋಜಿಸಿದ್ದ ಚಿಕ್ಕಮಗಳೂರು ಎಫ್ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ-೨೦೨೫-೨೬ರ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

ಕ್ರೀಡೆಗಳು ಜೀವನೋತ್ಸಾಹದ ಜೊತೆಗೆ ದೈಹಿಕ, ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿವೆ. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಪ್ರತಿಯೊಬ್ಬರೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಮಾತ್ರ ನಿಮ್ಮಲ್ಲಿರುವ ಪ್ರತಿಭೆ ಹೊರಬರಲು ಸಾಧ್ಯ ಎಂದರು.

ತೀರ್ಪುಗಾರರು ತಾರತಮ್ಯ ಇಲ್ಲದಂತೆ ನ್ಯಾಯಸಮ್ಮತವಾದ ನಿರ್ಣಯ ಕೈಗೊಳ್ಳಲಿದ್ದಾರೆ. ಜೀವನದಲ್ಲಿ ಸಾಧನೆ ಮಾಡಬೇಕಾದರೆ ದೈಹಿಕವಾಗಿ, ಮಾನಸಿಕವಾಗಿ ಉತ್ತಮ ಸಾಮರ್ಥ್ಯ ಪಡೆಯಲು ಕ್ರೀಡೆಗಳಲ್ಲಿ ಭಾಗವಹಿಸಿ ಜೀವನೋತ್ಸಾಹ ಹೆಚ್ಚಿಸಿಕೊಳ್ಳಿ ಎಂದು ಹೇಳಿದರು.

ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಗ್ರಾಮೀಣ ಕ್ರೀಡೆಗಳು ದೇಶದ ಬಹುದೊಡ್ಡ ಆಸ್ತಿ. ವಿದ್ಯಾರ್ಥಿಗಳು ಹೆಚ್ಚು ಗ್ರಾಮೀಣ ಮಟ್ಟದ ಕ್ರೀಡೆಗಳಲ್ಲಿ ಸ್ಪರ್ಧಿಸುವ ಮೂಲಕ ಪೂರ್ವಿಕರ ಕ್ರೀಡಾಕೂಟವನ್ನು ಉಳಿಸಿ ಬೆಳೆಸಬೇಕು ಎಂದರು.

ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿAದ ನಡೆಯುತ್ತಿರುವ ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ಉಪಯೋಗಿಯಾಗಿದೆ. ಗ್ರಾಮೀಣ ಭಾಗದ ಕ್ರೀಡೆಗಳು ನಶಿಸುತ್ತಿರುವ ಕಾಲದಲ್ಲಿ ವಿದ್ಯಾರ್ಥಿಗಳು ಇಂದಿಗೂ ದೇಹಕ್ಕೆ ಶಕ್ತಿ ತುಂಬುವAಥ ಕಬ್ಬಡಿ ಕ್ರೀಡೆ ಬೆಳೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಕ್ರೀಡಾಕೂಟಕ್ಕೆ ಸರ್ಕಾರದ ಜೊತೆಗೆ ಸಾರ್ವಜನಿಕರು, ದಾನಿಗಳು ಹಾಗೂ ಸ್ಥಳೀಯರ ಸಹಭಾಗಿತ್ವದಲ್ಲಿ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಶಿಕ್ಷಕರು ಕೂಡ ಮಕ್ಕಳಲ್ಲಿರುವ ಕ್ರೀಡಾಸಕ್ತಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇದರಿಂದ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ವಿದ್ಯಾರ್ಥಿಗಳು ಮುಂಚೂಣಿಗೆ ಬರಲು ಸಾಧ್ಯ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪ ಮಾತನಾಡಿ, ಕ್ರೀಡೆಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ. ಸ್ಪರ್ಧೆಗಳಲ್ಲಿ ಪ್ರಯತ್ನಗಳಿರಬೇಕು. ಗೆದ್ದರು ಖುಷಿಯಿರಲಿ. ಸೋತರೇ ಮತ್ತೊಮ್ಮೆ ಪ್ರಯತ್ನಿಸುವ ಛಲವು ಇದ್ದಲ್ಲಿ, ಭವಿಷ್ಯದಲ್ಲಿ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ, ಸಂಯೋಜಕ ಕೃಷ್ಣಮೂರ್ತಿ ಅರಸ್, ಲಕ್ಯಾ ಗ್ರಾಪಂ ಅಧ್ಯಕ್ಷ ಹನೀಫ್, ಉಪಾಧ್ಯಕ್ಷ ಕಾಂತರಾಜ್ ಮತ್ತಿತರರಿದ್ದರು.