ಬೇಲೂರು: ಕಸಬಾ ಬಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವ ಮೂಲಕ ಕೀರ್ತಿ ತಂದಿದ್ದಾರೆ ಎಂದು ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಎಚ್.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.
ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಕಸಬ ಬಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದ 29 ವಿದ್ಯಾರ್ಥಿನಿಯರು ಭಾಗವಹಿಸಿದ್ದು, ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ, ವೈಯಕ್ತಿಕ ವಿಭಾಗದಲ್ಲಿ ಮೇಘನಾ 3000 ಮೀ. ಪ್ರಥಮ, 1500 ಮೀ. ದ್ವಿತೀಯ, ಅಂಕಿತಾ 800 ಮೀ. ಪ್ರಥಮ, 1500 ಮೀ. ಪ್ರಥಮ, 3000 ಮೀ. ದ್ವಿತೀಯ, ಪ್ರಕೃತಿ 200 ಮೀ. ಪ್ರಥಮ, ದೀಪಿಕಾ 400 ಮೀ. ತೃತೀಯ, ಅಮೂಲ್ಯ 100 ಮೀ. ತೃತೀಯ ಸ್ಥಾನ ಗಳಿಸಿದ್ದಾರೆ. ಕ್ರೀಡಾಕೂಟದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಅಂಕಿತಾ ವೈಯಕ್ತಿಕ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.