ಕಲಬುರಗಿ: ಸೋಲೇ ಗೆಲುವಿನ ಸೋಪಾನ. ಹೀಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದನ್ನು ಮಕ್ಕಳು ರೂಢಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಚೇರಿ ಸಹಯೋಗದಡಿ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿ ಹಸ್ತಾಂತರಿಸಿ ಮಾತನಾಡಿದ ಅವರು, ರಾಜ್ಯ, ರಾಷ್ಟç ಮಟ್ಟದಲ್ಲಿ ಮಿಂಚಿರುವ ಅನೇಕ ಕ್ರೀಡಾಪಟುಗಳು ಕೆಳ ಹಂತದಿAದಲೇ ಮೇಲೆ ಬಂದಿದ್ದಾರೆ. ಹೀಗಾಗಿ ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಂದು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಸಾಧನೆಯತ್ತ ಹೆಜ್ಜೆ ಇರಿಸಬೇಕು ಎಂದರು.
ಇತ್ತೀಚಿಗೆ ಸರ್ಕಾರಗಳು ಕ್ರೀಡೆಗೆ ಪ್ರಮುಖ ಆದ್ಯತೆ ನೀಡುತ್ತಿವೆ. ಕ್ರೀಡಾಪಟುಗಳಿಗೆ ದೊರೆಯುವ ಯೋಜನೆ ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡುವ ಮೂಲಕ ಜಿಲ್ಲೆ, ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಪ್ರೋತ್ಸಾಹಿಸಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ್ ಮಾತನಾಡಿದರು. ಸುನೀಲ್, ರಾಜು ದೊಡ್ಮನಿ, ಸಂತೋಷ ಕೋಬಾಳ, ಚಂದ್ರಶೇಖರ ಇತರರಿದ್ದರು.