ಜಿಲ್ಲೆ

ಕ್ರೀಡೆಯಲ್ಲಿ ಸಾಧನೆಗೈಯಲು ಮುಂದಾಗಿ

ರಮೇಶ ಮೇಳಕುಂದಾ

ಹುಮಬಾಬಾದ್: ಪ್ರತಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಜತೆಗೆ ಕ್ರೀಡೆಯಲ್ಲಿ ಸಾಧನೆಗೈಯಲು ಮುಂದಾಗಬೇಕು ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.
ಮಾಣಿಕನಗರದ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಶಿಕ್ಷಣದ ಜತೆ ಜತೆಗೆ ಕ್ರೀಡಾ ಮನೋಭಾವ ಮೈಗೂಡಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಸಮನಾಗಿ ಸ್ವೀಕರಿಸಿ, ಸತತ ಪ್ರಯತ್ನ ನಡೆಸಬೇಕು ಎಂದರು.
ಕ್ರೀಡೆಯಲ್ಲಿ ಸಾಧನೆಗೆ ವಿಫುಲ ಅವಕಾಶಗಳಿವೆ. ಸದುಪಯೋಗ ಪಡಿಸಿಕೊಂಡು ರಾಜ್ಯ, ರಾಷ್ಟ ಮಟ್ಟದಲ್ಲಿ ಸಾಧನೆ ಕೀರ್ತಿ ತರಬೇಕು. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಶಕ್ತಿ ಹತೋಟಿಯಲ್ಲಿ ಇಡಲು ಸಹಕಾರಿ ಆಗಲಿದೆ. ನಮ್ಮ ಮನಸ್ಸನ್ನು ಒಂದೆಡೆ ಕೇಂದ್ರೀಕರಿಸಬಹುದು. ಸದೃಢರಾಗಲು ಸಾಧ್ಯ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಂಚಶೀಲಾ ಹೆಗ್ಗಣಿ ಅಧ್ಯಕ್ಷತೆ ವಹಿಸಿದ್ದರು. ಸರ್ವೋದಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರಕಾಶ ಬತಲಿ, ಉಪಾಧ್ಯಕ್ಷ ಗುರುಲಿಂಗ ಭಾವಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಪಿ.ಆರ್.ಹುಗ್ಗಿ, ಪ್ರಾಚಾರ್ಯ ಶಾಂತವೀರ ಯಲಾಲ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸೂರ್ಯಕಾಂತ ಹಾವಶೆಟ್ಟಿ, ಕಾರ್ಯದರ್ಶಿ ವೀರೇಂದ್ರ ಮುರಡಾ, ಪ್ರಮುಖರಾದ ಮಲ್ಲಿಕಾರ್ಜುನ ಸೀಗಿ, ಮಾಣಿಕರಡ್ಡಿ, ಶ್ರೀನಾಥ ದೇವಣಿ, ಸುನೀಲ್ ಪತ್ರಿ ಇತರರಿದ್ದರು.