ಜಿಲ್ಲೆ

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ

ಚಾಮರಾಜನಗರ: ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿಯಾಗಿದೆ ಎಂದು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಬಸವರಾಜು ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸೋಮವಾರಪೇಟೆ ಎಂಸಿಎಸ್ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು.
ಓದಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ರೀತಿಯಲ್ಲಿ ಕ್ರೀಡೆಯಲ್ಲೂ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕೆಲಸಗಳು ಆಗಬೇಕು. ಮಕ್ಕಳ ಬೆಳವಣಿಗೆ ಪಠ್ಯದ ಜತೆಗೆ ಪತ್ಯೇತರ ಚಟುವಟಿಕೆ ಮುಖ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಎಂಸಿಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಚ್. ಎಂ. ವೀರೇಶ್ವರ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪೊಲೀಸ್ ಠಾಣೆಯ ಎಎಸ್‌ಐಗಳಾದ ದೊರೆಸ್ವಾಮಿ, ವಿಶ್ವ, ಮುಖ್ಯಪೇದೆ ಸಿದ್ಧಶೆಟ್ಟಿ, ಸಂಸ್ಥೆಯ ನಿರ್ದೇಶಕ ಡಿ.ಎನ್.ಮಹದೇವಪ್ಪ, ಆಡಳಿತಾಧಿಕಾರಿ ನಾಗರಾಜು, ಪ್ರಾಂಶುಪಾಲ ಕೆ.ಶಶಿಧರ್‌ಮೂರ್ತಿ, ಮುಖ್ಯ ಶಿಕ್ಷಕ ಎಚ್.ಎಂ.ಮಹದೇವಸ್ವಾಮಿ,  ಶಿಕ್ಷಕರಾದ ಎನ್. ಮಹದೇವಸ್ವಾಮಿ, ಸಂಪತ್‌ಕುಮಾರ್, ಗೀತಾ, ಲಿಂಗರಾಜು, ನಾಗೇಂದ್ರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.