ಚಿತ್ರದುರ್ಗ:ಆಮ್‌ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕ್ರೇಜಿವಾಲ್ ಅವರ ಬಂಧನ ಖಂಡಿಸಿ ಏ.7ರಂದು ಡಿಸಿ ಕಚೇರಿ ಬಳಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಆಮ್ ಆದ್ಮಿಪಾರ್ಟಿ ಜಿಲ್ಲಾಧ್ಯಕ್ಷ ಬಿ.ಜಗದೀಶ್ ಹೇಳಿದ್ದಾರೆ. ಪಕ್ಷದ ಮುಖಂಡರು,ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.