ಹೊಸಪೇಟೆ: ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ವಿಶ್ವ ಅರೋಗ್ಯ ಸಂಸ್ಥೆಯ ಸಲಹೆಗಾರರು ಡಬ್ಲ್ಯೂ.ಎಚ್.ಓ. ಡಾ.ಲಿಮ್ರ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯದಿಂದ ನಗರದ ತಾಲೂಕು ಅರೋಗ್ಯಾಧಿಕಾರಿಗಳ ಕಚೇರಿಯಯಲ್ಲಿ ಬುಧವಾರ ನಡೆದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನದಡಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಂದೋಲನದದಲ್ಲಿ ಮಾತನಾಡಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ ಅಧಿಕಾರಿ ಡಾ.ಭಾಸ್ಕರ್ ಮಾತನಾಡಿ, ಪ್ರತಿಯೊಬ್ಬರು ಸ್ವಇಚ್ಛೆಯಿಂದ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಆರು ತಿಂಗಳ ಕಾಲ ಪೌಷ್ಟಿಕ ಆಹಾರ ಸೇವೆನೇಗಾಗಿ ದತ್ತು ತೆಗೆದುಕೊಳ್ಳಬೇಕು. ಕ್ಷಯರೋಗಿಗಳ ಮರಣ ಪ್ರಮಾಣ ಹಾಗೂ ಅನಾರೋಗ್ಯದ ಪ್ರಮಾಣವನ್ನು ಕಡಿಮೆಗೊಳಿಸುವ ಮೂಲಕ ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಿಕ್ಷಯ್ ಮಿತ್ರರಾಗಿ ಸಹಕಾರ ನೀಡಬೇಕು. ಸ್ವಸ್ಥ ನಾರಿ ಸಶಕ್ತ ಪರಿವಾರ ಆಂದೋಲನವು ಜಿಲ್ಲೆಯಲ್ಲಿ ಸೆ.17ರಿಂದ ಆರಂಭವಾಗಿದ್ದು ಅ.02ರ ವರೆಗೆ ನಡೆಯಲಿದೆ. 15 ದಿನದ ಈ ಅಭಿಯಾನದಲ್ಲಿ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ರೋಗ ಪತ್ತೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ತಾಲೂಕು ಕ್ಷಯರೋಗ ಮೇಲ್ವಿಚಾರಕರರಾದ ಕಾಸಿಮ್ ಸಾಬ್, ಡಿ.ಪಿ.ಎಸ್.ಕೃಷ್ಣ, ಎಚ್‌ಐಓ ಮಂಜುನಾಥ, ಬಿಪಿಎಂ ಕವಿತಾ, ಶ್ರೀದೇವಿ, ಭೋಜರಾಜು, ಭಾಸ್ಕರ್, ಸರಸ್ವತಿ ಇತರರಿದ್ದರು.