Oplus_131072 
ಜಿಲ್ಲೆ

ಕ್ಷೇತ್ರಕ್ಕೆ 200 ಕೋಟಿ ರೂ. ಅನುದಾನ

ನಂಜನಗೂಡು: ನಿಮ್ಮ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸುವುದು ಜನಪ್ರತಿನಿಧಿಯಾದ ನನ್ನ ಕರ್ತವ್ಯ ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಪಟ್ಟಣದ ಹಳ್ಳದ ಕೇರಿ ಮೂಲಕ ದೇವರಸನಹಳ್ಳಿ, ಹೊಸೂರು, ಉಪ್ಪಿನಹಳ್ಳಿ ಗ್ರಾಮದವರೆಗೆ ಸುಮಾರು 6 ಕಿ.ಮೀ. ರಸ್ತೆ ಗುಣಮಟ್ಟದಲ್ಲಿ ನಿರ್ಮಾಣವಾಗಲಿದೆ. ಕ್ಷೇತ್ರಕ್ಕೆ ಕಳೆದ ಎರಡು ವರ್ಷಗಳಲ್ಲಿ ಅಭಿವೃದ್ಧಿಗಾಗಿ ಸರ್ಕಾರದಿಂದ 200 ಕೋಟಿ ರೂ.ಅನುದಾನವನ್ನು ತಂದಿದ್ದೇನೆ ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಶಾಸಕರು ಕ್ಷೇತ್ರಕ್ಕೆ ಎರಡು ವರ್ಷದಲ್ಲಿ ವಿವಿಧ ಇಲಾಖೆಗಳಿಗೆ ಹಣ ತಂದಿದ್ದಾರೆ. ನಗರ ಪ್ರದೇಶಕ್ಕೆ ಹತ್ತಿರವಾಗಿರುವ ದೇವಸನಹಳ್ಳಿ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಇತ್ತು. ಗ್ರಾಮಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಬಿಜೆಪಿ ಸರ್ಕಾರ ಬೇರೆ ಕಡೆಗೆ ವರ್ಗಾವಣೆ ಮಾಡಿ ಗ್ರಾಮದ ಅಭಿವೃದ್ಧಿಗೆ ಅಡ್ಡಿ ಉಂಟು ಮಾಡಿತ್ತು. 20 ವರ್ಷಗಳಲ್ಲಿ ಆಗದ ಕೆಲಸವನ್ನು ಕೇವಲ ಎರಡು ವರ್ಷಗಳಲ್ಲಿ ಕ್ಷೇತ್ರದ ಶಾಸಕರು ಮಾಡುತ್ತಿದ್ದಾರೆ ಎಂದರು.

ನಗರಸಭಾಧ್ಯಕ್ಷ ಶ್ರೀಕಂಠ, ಕುರಹಟ್ಟಿ ಮಹೇಶ್, ಡಿ.ಎಸ್.ರಘು, ಚಂದನ್‌ಗೌಡ, ಗ್ರಾಪಂ ಅಧ್ಯಕ್ಷೆ ಸೌಭಾಗ್ಯಾ, ಉಪಾಧ್ಯಕ್ಷ ನಂಜಪ್ಪ, ಉಮೇಶ್ ರಾಜ್, ಮಂಜು, ಸತೀಶ್, ಪಿಡಿಒ ಚೈತ್ರಾ, ಇಒ ಜೆರಾಲ್ಡ್ ರಾಜೇಶ್, ವಿಜಯಕುಮಾರ್, ಮುದ್ದು ಮಾದಶೆಟ್ಟಿ, ಎಇ ಬಸವರಾಜು ಇದ್ದರು.