ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಕ್ಷೇತ್ರದ ಶಾಸಕಿ,ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹೇಳಿದರು
ತಾಲೂಕಿನ ಬೆಂಡಿಗೇರಿ ಗ್ರಾಮದ ವಿಠ್ಠಲ ರುಕ್ಮಿಣಿ ದೇವಸ್ಥಾನದ ನೂತನ ಕಟ್ಟಡ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಸೋಮವಾರ ಭೂಮಿ ಪೂಜೆ ನೆರವೇರಿಸಿ,ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಇದೇ ಸಮಯದಲ್ಲಿ 25 ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ಸೂಚಿಸಿದರು.
ಸಿ.ಸಿ.ಪಾಟೀಲ, ಅಡಿವೇಶ ಇಟಗಿ, ಸುರೇಶ ಇಟಗಿ, ಪ್ರಕಾಶ ಜಪ್ತಿ, ಸಿದ್ದು ಹಾವಣ್ಣವರ್, ಪ್ರಕಾಶ ಪಾಟೀಲ, ರವಿ ಮೇಳೆದ್, ಸಂಗಪ್ಪ ಕುಡಚಿ, ಗೌಸ್ ಜಾಲಿಕೊಪ್ಪ, ಬಾಳಪ್ಪ ಮಾಡಲಗಿ, ಬಸವ್ವ ಚೌಹಾನ್,ಶಿವಾನಂದ ಚಂಡು, ಭರಮಣ್ಣ ದೊಡಮನಿ, ಮುರಸಿದ್ಧ ಬಾಳೇಕುಂದ್ರಿ, ಪದ್ಮರಾಜ ಪಾಟೀಲ, ಮನೋಹರ್ ಬೆಳಗಾಂವ್ಕರ್, ಪುಂಡಲಿಕ್ ನನೋಜಿ ಇತರರಿದ್ದರು.