ಜಿಲ್ಲೆ

ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ತಾಲೂಕಿನ ಕಣ್ಣೇಗಾಲ ಗ್ರಾಮದ ಕುರುಬರ ಬೀದಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕೆ 10 ಲಕ್ಷ ರೂ. ಮಂಜೂರಾಗಿದ್ದು, ಚಾಲನೆ ನೀಡಲಾಗಿದೆ. ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳ ರಸ್ತೆಗಳು ಉತ್ತಮವಾಗಿರಬೇಕು ಎಂಬ ಉದ್ದೇಶದಿಂದ ಸಿಸಿ ರಸ್ತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು. ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಿದ್ದು, ಅನುದಾನ ಸಿಗುವ ನಿರೀಕ್ಷೆ ಇದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮಗಳ ಜನರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಯೋಗೇಂದ್ರ, ಕೆಂಪನಪುರ ಗ್ರಾ.ಪಂ ಅಧ್ಯಕ್ಷ ಕೆ.ಸಿ.ನಾಗರಾಜು, ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಆರ್.ಮಾದೇಶ್, ಸದಸ್ಯರಾದ ರಾಮನಾಯಕ, ತಾಯಮ್ಮ, ಸೋಮಣ್ಣ, ಮುಖಂಡರಾದ ಕೆ.ಸಿ.ನಾಗಣ್ಣ, ಚಿಕ್ಕಮಾದೇಗೌಡ, ಮಲ್ಲಣ್ಣ, ಕೃಷ್ಣನಾಯಕ, ಲೋಕೇಶ್ ಇತರರು ಭಾಗವಹಿಸಿದ್ದರು.