???????????????????????????????????? 
ಜಿಲ್ಲೆ

ಖರ್ಗೆ, ಖಂಡ್ರೆ ಅವಹೇಳನಕ್ಕೆ ತೀವ್ರ ಖಂಡನೆ

ಬೀದರ್: ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಅವರ ಅವಹೇಳನ ಮಾಡಿರುವುದನ್ನು ಕಾಂಗ್ರೆಸ್ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.
ಖರ್ಗೆ ಅವರು ಶಾಸಕ, ರಾಜ್ಯದ ಸಚಿವ, ಕೇಂದ್ರ ಸಚಿವ, ಲೋಕಸಭೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ, ರಾಜ್ಯಸಭೆ ಪ್ರತಿ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ. ಬಣ್ಣ ಹಾಗೂ ತಲೆಗೂದಲು ಉದಾಹರಣೆ ಕೊಟ್ಟು, ಅವರ ಬಗ್ಗೆ ವ್ಯಂಗ್ಯವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಹೇಳಿದ್ದಾರೆ.
ಅರಣ್ಯ ಸಚಿವರಿಗೆ ಗಿಡ-ಮರ ಏನೆಂಬುದೇ ಗೊತ್ತಿಲ್ಲ ಎಂದು ಹೇಳಿರುವುದು ಹಾಸ್ಯಾಸ್ಪದ. ಕಳೆದ ಚುನಾವಣೆಯಲ್ಲಿ ಬಿಜೆಪಿ ಸೋತು ಸುಣ್ಣವಾಗಿದ್ದು, ಮಾಜಿ ಸಚಿವರು ಹತಾಶೆಗೊಂಡು ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.