ಜಿಲ್ಲೆ

ಖರ್ಗೆ ಹೇಳಿಕೆಗೆ ಖಂಡನೆ

ಎ.ಎಸ್.ಮಣಿಕಂಠ

ಚಾಮರಾಜನಗರ: ಅಲ್ಪಸಂಖ್ಯಾತರರನ್ನು ತೃಷ್ಠೀಕರಣ ಮಾಡುವ ಭರದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬಹುಸಂಖ್ಯಾತ ಹಿಂದುಗಳ ಮನಸ್ಸಿಗೆ ಘಾಸಿಯಾಗುವಂತೆ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಚುಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ ತೀವ್ರವಾಗಿ ಖಂಡಿಸಿದ್ದಾರೆ.

ಶತ ಶತಮಾನಗಳಿಂದ ನಡೆದುಕೊಂಡು ಬಂದಿರುವ ಕುಂಭಮೇಳದ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರ ಹಿಂದು ವಿರೋಧಿ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.