ಜಿಲ್ಲೆ

ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಕಾರ್ಯಕ್ರಮ ಸಂಯೋಜಕರು ಮತ್ತು ಕಚೇರಿ ಸಹಾಯಕರ ತಲಾ ಒಂದು ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿಸಲಾಗಿದೆ.

ಜಿಲ್ಲಾ ಸಂಯೋಜಕರ ಹುದ್ದೆಗೆ ಯಾವುದಾದರೂ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರುವ ಬಗ್ಗೆ ಮಾಹಿತಿ ಒದಗಿಸಬೇಕು. ಆಯ್ಕೆಯಾದ ಅಭ್ಯರ್ಥಿಗೆ 19,223 ರೂ. ಗೌರವಧನ ನೀಡಲಾಗುವುದು. ಕಚೇರಿ ಸಹಾಯಕರ ಹುದ್ದೆಗೆ ಪಿ.ಯು.ಸಿ. ಮತ್ತು ಮೇಲ್ಪಟ್ಟ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗೆ 15,569 ರೂ. ಗೌರವಧನ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ನಗರದ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ (ಕೊಠಡಿ ಸಂಖ್ಯೆ 129) ಅರ್ಜಿ ಪಡೆದು ಭರ್ತಿ ಮಾಡಿ ಅಕ್ಟೋಬರ್ 17ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಷರತ್ತುಗಳಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.